Homeಕ್ರೀಡೆP.Cricketಏಕದಿನ ಸರಣಿಗೆ ಭಾರತ ಸಜ್ಜು..!

ಏಕದಿನ ಸರಣಿಗೆ ಭಾರತ ಸಜ್ಜು..!

ಬೆಂಗಳೂರು: ಟೆಸ್ಟ್ ಮತ್ತು ಟಿ20 ಸರಣಿಗಳಲ್ಲಿ ಅಮೋಘ ಪ್ರದರ್ಶನ ತೋರಿರುವ ಭಾರತ ಕ್ರಿಕೆಟ್ ತಂಡ, ಇಂಗ್ಲೆಂಡ್ ಎದುರಿನ ಏಕದಿನ ಸರಣಿಯಲ್ಲಿ ಸೆಣಸಾಟ ಮಾಡಲಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಹಣಾಹಣಿ ನಾಳೆ ನಡೆಯಲಿದೆ. ನಾಲ್ಕು ಟೆಸ್ಟ್ ಪಂದ್ಯಗಳ ಮೊದಲ ಎರಡು ಪಂದ್ಯಗಳು ಚೆನ್ನೈನಲ್ಲಿ ನಡೆದಿದ್ದವು. ಉಳಿದೆರಡು ಪಂದ್ಯಗಳಿಗೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಆತಿಥ್ಯ ವಹಿಸಿತ್ತು. ಸರಣಿಯಲ್ಲಿ ಭಾರತ 3–1ರಿಂದ ಜಯ ಸಾಧಿಸಿತ್ತು. ಇನ್ನು ಟಿ20 ಸರಣಿಯ ಎಲ್ಲ ಐದು ಪಂದ್ಯಗಳು ಅಹಮದಾಬಾದ್‌ನಲ್ಲಿ ನಡೆದಿದ್ದವು.

ಇಲ್ಲಿ ಭಾರತ 3–2 ಅಂತರದಲ್ಲಿ ಗೆಲುವು ಪಡೆದಿತ್ತು. ಅಹಮದಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಪುಣೆ ತಲುಪಿರೋ ವಿರಾಟ್ ಕೊಹ್ಲಿ ನಾಯಕತ್ವದ ತಂಡದಲ್ಲಿ ಕರ್ನಾಟಕದ ವೇಗಿ ಪ್ರಸಿದ್ಧ ಕೃಷ್ಣ, ಆಲ್‌ರೌಂಡರ್ ಕೃಣಾಲ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಇದ್ದಾರೆ. ಪಂದ್ಯಗಳು ಪುಣೆಯ ಗಾಹುಂಜೆಯಲ್ಲಿರುವ ಮಹಾರಾಷ್ಟ್ರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಲ್ಲಿ ಪ್ರೇಕ್ಷಕರಿಗೆ ಅವಕಾಶ ಇಲ್ಲ. 18 ಮಂದಿಯ ತಂಡದಲ್ಲಿ ರೋಹಿತ್ ಶರ್ಮಾ, ಶಿಖರ್ ಧವನ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಭುವನೇಶ್ವರ್ ಕುಮಾರ್ ಅವರೂ ಇದ್ದಾರೆ. ಭಾರತ ಕಳೆದ ವರ್ಷ ಕೊನೆಯದಾಗಿ ಏಕದಿನ ಸರಣಿ ಆಡಿದ್ದು, ಆಸ್ಟ್ರೇಲಿಯಾ ವಿರುದ್ಧ 1–2ರ ಅಂತರದಲ್ಲಿ ಸೋತಿತ್ತು.

LEAVE A REPLY

Please enter your comment!
Please enter your name here

- Advertisment -

Most Popular

Recent Comments