ನವದೆಹಲಿ: ದೇಶದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೋವಿಡ್-19 ಗೆ ತುತ್ತಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಕಳೆದ ಕೆಲವು ದಿನಗಳಿಂದ ದೇಶದ ಸೋಂಕಿತರ ಸಂಖ್ಯೆಯಲ್ಲಿ ಮೂರು ಸಾವಿರದಷ್ಟು ಏರಿಕೆಯಾಗುತ್ತಿತ್ತು. ಆದರೆ ಕಳೆ ದ 24 ಗಂಟೆಯಲ್ಲಿ 4,213 ರಷ್ಟು ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 67,152ಕ್ಕೇರಿಕೆಯಾಗಿದೆ. ಜೊತೆಗೆ 97 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು ಈವರೆಗೆ 2,206 ಜನ ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 22,171ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 1,943 ಜನರಲ್ಲಿ ಸೊಂಕು ದೃಢಪಟ್ಟಿದೆ. ಅದರಲ್ಲಿ ಮುಂಬೈ ಒಂದರಲ್ಲೇ 13,739 ಜನರಿಗೆ ಸೋಂಕು ತಗುಲಿದೆ. ಒಂದೇ ದಿನದಲ್ಲಿ 53 ಸಾವನ್ನಪ್ಪಿದ್ದು, ಮೃತರ ಸಂಖ್ಯೆ 832ಕ್ಕೆ ಏರಿಕೆಯಾಗಿದೆ. ಗುಜರಾತ್ನಲ್ಲಿ 398 ಸೋಂಕಿತರು ಪತ್ತೆಯಾಗಿದ್ದು, ಈವರೆಗೆ ಒಟ್ಟು 8,194 ಜನರಲ್ಲಿ ಸೋಂಕು ದೃಢಪಟ್ಟಿದೆ. ನಿನ್ನೆಯಿಂದ ಇಂದಿಗೆ ಸಾವನ್ನಪ್ಪಿದವರ ಸಂಖ್ಯೆಯೂ 21ರಷ್ಟು ಏರಿಕೆಯಾಗಿದ್ದು, ಈವರೆಗೆ 493 ಜನ ಮೃತಪಟ್ಟಿದ್ದಾರೆ.
ಇನ್ನು ದೇಶದ ಸೋಂಕಿತರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದ ತಮಿಳುನಾಡು ಇದೀಗ ಮೂರನೇ ಸ್ಥಾನಕ್ಕೆ ಬಂದು ನಿಂತಿದೆ. ಕೇವಲ 24 ಗಂಟೆಯಲ್ಲಿ 669 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ 7,204 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ಮೂರು ಜನ ಸಾವನ್ನಪ್ಪಿದ್ದು, ಒಟ್ಟು 493 ಜನ ಸೋಂಕಿತರು ಮೃತಪಟ್ಟಂತಾಗಿದೆ.
ಸೋಂಕಿತರ ಪಟ್ಟಿಯಲ್ಲಿ ದೆಹಲಿ ಒಂದು ಸ್ಥಾನ ಕೆಳಗಿಳಿದಿದ್ದು, ಈವರೆಗೆ ಒಟ್ಟು 6,923 ಜನರಲ್ಲಿ ಸೋಂಕು ದೃಢಪಟ್ಟಿದೆ. ನಿನ್ನೆಯಿಂದ ಇಂದಿಗೆ 381 ಜನರಲ್ಲಿ ಸೋಂಕು ಪತ್ತೆಯಾಗಿದೆ. ಆದರೆ ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಹಾಗಾಗಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 73 ಕ್ಕೆ ಸ್ಥಿರವಾಗಿದೆ.
zithromax for tooth infection
zithromax online pharmacy
1ambiguous