Monday, January 17, 2022
Powertv Logo
Homeಕ್ರೀಡೆಭಾರತ ದಕ್ಷಿಣ ಆಫ್ರಿಕಾ ಸರಣಿ ಪಕ್ಕಾ ಫಿಕ್ಸ್

ಭಾರತ ದಕ್ಷಿಣ ಆಫ್ರಿಕಾ ಸರಣಿ ಪಕ್ಕಾ ಫಿಕ್ಸ್

ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಟೆಸ್ಟ್ ಸರಣಿ ನಡಿತಾಯಿದ್ದು, ಈಗಾಗಲೇ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯವಾಗಿದೆ. ಇನ್ನು ನ್ಯೂಜಿಲೆಂಡ್ ವಿರುದ್ಧದ ಸರಣಿ ನಂತರ , ಭಾರತ ಮತ್ತು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಆತಿಥೇಯ ತಂಡದ ವಿರುದ್ಧ 3 ಟೆಸ್ಟ್, 3 ಏಕದಿನ ಹಾಗೂ 4 ಟಿ20 ಪಂದ್ಯಗಳನ್ನು ಆಡಬೇಕಿದೆ.

ಆದರೆ ಪ್ರಪಂಚದಾದ್ಯಂತ ಓಮಿಕ್ರಾನ್ ವೈರಸ್ ಬಹಳಷ್ಟು ಆತಂಕವನ್ನು ಸೃಷ್ಟಿ ಮಾಡಿದೆ. ಅದರಲ್ಲೂ ಆಫ್ರಿಕಾ ರಾಷ್ಟ್ರಗಳಲ್ಲಿ ಒಮಿಕ್ರಾನ್ ಹಾವಳಿ ಹೆಚ್ಚಾಗಿದ್ದು, ಈ ಹಿನ್ನೆಲೆ ಟೂರ್ನಿ ಆಯೋಜನೆ ಬಗ್ಗೆ ಅನೇಕ ಚರ್ಚೆಗಳು ಹರಿದಾಡುತ್ತಿತ್ತು. ಈ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ಸರಣಿಯು ಪೂರ್ವ ನಿಗದಿಯಂತೆ ನಡೆಯಲಿದೆ ಎಂದು ಸ್ಪಷ್ಟನೆ ನೀಡಿದೆ.

ಡಿಸೆಂಬರ್ 17ರಿಂದ ಮೊದಲ ಟೆಸ್ಟ್ ಆರಂಭವಾಗಬೇಕಿದೆ. ಇನ್ನು ಟೀಂ ಇಂಡಿಯಾ ಈ ಸರಣಿಯ ಹಿನ್ನೆಲೆಯಲ್ಲಿ ಸುಮಾರು 7 ವಾರಗಳ ಕಾಲ ಇರಬೇಕಾಗಿದೆ.

 

LEAVE A REPLY

Please enter your comment!
Please enter your name here

- Advertisment -

Most Popular

Recent Comments