Sunday, May 29, 2022
Powertv Logo
Homeದೇಶದೇಶದ ಸೋಂಕಿತರ ಪಟ್ಟಿಯಲ್ಲಿ 7 ಸ್ಥಾನಕ್ಕೆ ಜಿಗಿದ ಭಾರತ

ದೇಶದ ಸೋಂಕಿತರ ಪಟ್ಟಿಯಲ್ಲಿ 7 ಸ್ಥಾನಕ್ಕೆ ಜಿಗಿದ ಭಾರತ

ನವದೆಹಲಿ: ಭಾರತದಲ್ಲಿ ಸೋಂಕಿತರ ಸಂಖ್ಯೆ ತುಂಬಾ ವೇಗವಾಗಿ ಏರಿಕೆಯಾಗುತ್ತಿದ್ದು, ವಿಶ್ವದ ಸೋಂಕಿತರ ಪಟ್ಟಿಯಲ್ಲಿ ಭಾರತ 9 ನೇ ಸ್ಥಾನದಿಂದ 7 ನೇ ಸ್ಥಾನಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 8,171 ಜನರಲ್ಲಿ ಕಂಡುಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,98,706 ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 204 ರಷ್ಟು ಜನ ಸೋಂಕಿತರು ಸಾವನ್ನಪ್ಪಿದ್ದು, ಈವರೆಗೆ 5,598 ಜನ ಸೋಂಕಿತರು ಮೃತಪಟ್ಟಿದ್ದಾರೆ. 1,98,706 ಸೋಂಕಿತರಲ್ಲಿ 95 ಸಾವಿರದಷ್ಟು ಜನ ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಮಹಾರಾಷ್ಟ್ರ ಒಂದರಲ್ಲೇ 2 ಸಾವಿರದಷ್ಟು ಜನ ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 70.013 ಕ್ಕೆ ಏರಿಕೆಯಾಗಿದೆ. ಇದರಲ್ಲಿ ಸಾವನ್ನಪ್ಪಿದವರ ಸಂಖ್ಯೆ 76 ರಷ್ಟು ಹೆಚ್ಚಾಗಿದ್ದು, ಒಟ್ಟು 2,362 ಜನ ಸೋಂಕಿತರು ಸೋಂಕಿನಿಂದ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ 23,495 ಜನ ಸೋಂಕಿತರು ಪತ್ತೆಯಾಗಿದ್ದು, ಈವರೆಗೆ ಒಟ್ಟು 184 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇನ್ನು ದೆಹಲಿಯಲ್ಲಿ ಈವರೆಗೆ 20,834 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಕಳೆದ 24 ಗಂಟೆಯಲ್ಲಿ 990 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನು ಸಾವನ್ನಪ್ಪಿದವರ ಸಂಖ್ಯೆ 523 ಕ್ಕೆ ಏರಿಕೆಯಾಗಿದೆ. 

LEAVE A REPLY

Please enter your comment!
Please enter your name here

- Advertisment -

Most Popular

Recent Comments