Homeಕ್ರೀಡೆP.CricketIND vs KIWIS : ಕ್ಲೀನ್ ಸ್ವೀಪ್ ಮಾಡಲು ಭಾರತ ಸಿದ್ಧ..!

IND vs KIWIS : ಕ್ಲೀನ್ ಸ್ವೀಪ್ ಮಾಡಲು ಭಾರತ ಸಿದ್ಧ..!

ಪಶ್ಚಿಮ ಬಂಗಾಳ: ಕೋಲ್ಕತಾದ ಈಡನ್​​ಗಾರ್ಡನ್ ಮೈದಾನದಲ್ಲಿಂದು ಭಾರತ-ನ್ಯೂಜಿಲೆಂಡ್ ಮುಖಾಮುಖಿಯಾಗುತ್ತಿವೆ. ಭಾರತ ತಂಡ ಈಗಾಗಲೇ ಟಿ20 ಯ ಎರಡು ಪಂದ್ಯಗಳನ್ನು ಗೆದ್ದು ಸರಣಿಯನ್ನು ತನ್ನದಾಗಿಸಿಕೊಂಡಿದೆ. ರೋಹಿತ್ ಪಡೆ ಕಿವೀಸ್ ಎದುರು ಕ್ಲೀನ್ ಸ್ವೀಪ್ ಮಾಡುವ ಲೆಕ್ಕಾಚಾರದಲ್ಲಿದು, ಇನ್ನು ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ತಂಡದಲ್ಲಿ ಕೆಲವೊಂದಿಷ್ಟು ಬದಲಾವಣೆಗಳನ್ನು ಮಾಡುವ ಸಾಧ್ಯತೆ ಇದೆ.

ಆಡಿರುವ ಎರಡು ಪಂದ್ಯಗಳಲ್ಲಿ ಅವಕಾಶ ಸಿಗದ ಆಟಗಾರರಿಗೆ ಈ ಪಂದ್ಯದಲ್ಲಿ ಆಡುವ ಹನ್ನೊಂದರಲ್ಲಿ ಸ್ಥಾನ ಸಿಗುವ ನಿರೀಕ್ಷೆ ಇದೆ.

ಇನ್ನು ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡಬೇಕಿರುವ ಕೆ.ಎಲ್. ರಾಹುಲ್, ರಿಷಭ್ ಪಂತ್ ಭುವನೇಶ್ವರ್ ಕುಮಾರ್ ಸೇರಿದಂತೆ ಅಕ್ಷರ್ ಪಟೇಲ್ಗೆ ವಿಶ್ರಾಂತಿ ನೀಡಿ ಅವರ ಬದಲಿಗೆ ಋುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಆವೇಶ್ ಖಾನ್, ಯಜುವೇಂದ್ರ ಚಹಲ್ಗೆ ಸ್ಥಾನ ನೀಡುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments