Home ಕ್ರೀಡೆ P.Cricket ಭಾರತಕ್ಕೆ ಇನ್ನಿಂಗ್ಸ್​ ಗೆಲುವು ; ಸರಣಿ 'ಸೋತಾ'ಫ್ರಿಕಾ..!

ಭಾರತಕ್ಕೆ ಇನ್ನಿಂಗ್ಸ್​ ಗೆಲುವು ; ಸರಣಿ ‘ಸೋತಾ’ಫ್ರಿಕಾ..!

ಪುಣೆ : ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಇನ್ನಿಂಗ್ಸ್​​​​ ಮತ್ತು 137ರನ್​ಗಳ ಭರ್ಜರಿ ಜಯ ದಾಖಲಿಸಿದೆ. ಇದರೊಂದಿಗೆ ಇನ್ನೂ ಒಂದು ಮ್ಯಾಚ್​ ಬಾಕಿ ಇರುವಾಗಲೇ ದಕ್ಷಿಣ ಆಫ್ರಿಕಾ ಸೋಲುಂಡಿದೆ..
ಪುಣೆಯಲ್ಲಿ ನಡೆದ 2ನೇ ಟೆಸ್ಟ್​ನಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ಕ್ಯಾಪ್ಟನ್ ಕೊಹ್ಲಿ ಅಜೇಯ ದ್ವಿಶತಕ (254), ಕನ್ನಡಿಗ ಮಯಾಂಕ್ ಅಗರ್​ವಾಲ್​ ಶಕತ (108), ಟೆಸ್ಟ್​ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ (58), ಅಜಿಂಕ್ಯ ರಹಾನೆ (59), ಆಲ್​ರೌಂಡರ್ ಜಡೇಜಾ (91) ಆಕರ್ಷಕ ಅರ್ಧಶತಕಗಳ ನೆರವಿನಿಂದ 601ರನ್ ಮಾಡಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.
ಇದಕ್ಕೆ ಉತ್ತರವಾಗಿ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಸೌತ್ಆಫ್ರಿಕಾ ರವಿಚಂದ್ರನ್​ ಅಶ್ವಿನ್ (4 ವಿಕೆಟ್) ಮತ್ತು ಇಶಾಂತ್ ಶರ್ಮಾ (3 ವಿಕೆಟ್) ದಾಳಿಗೆ ತತ್ತರಿಸಿ 275ರನ್​ಗಳಿಗೆ ಆಲ್​ಔಟ್ ಆಯಿತು. ಸೆಕೆಂಡ್​ ಇನ್ನಿಂಗ್ಸ್​ನಲ್ಲೂ ದ.ಆಫ್ರಿಕಾ ಬ್ಯಾಟ್ಸ್​ಮನ್​ಗಳ ಪೆವಿಲಿಯನ್ ಪೆರೇಡ್ ಮುಂದುವರೆಯಿತು. ರವೀಂದ್ರ ಜಡೇಜಾ (3 ವಿಕೆಟ್​) , ಉಮೇಶ್ ಜಾಧವ್ (3 ವಿಕೆಟ್) ಮತ್ತು ರವಿಚಂದ್ರನ್ ಅಶ್ವಿನ್​ (2 ವಿಕೆಟ್) ದಾಳಿಗೆ ಬ್ಯಾಟ್​ ಬೀಸಲಾಗದೆ, ಕ್ರೀಸ್​ನಲ್ಲಿ ನೆಲಯೂರಿ ಟೈಮ್​ಪಾಸ್ ಮಾಡಲೂ ಆಗದೆ 189ರನ್​ಗಳಿಗೆ ಆಲ್​ಔಟ್ ಆಯಿತು. ಎರಡೂ ಸಲ ಬ್ಯಾಟಿಂಗ ಮಾಡಿದರೂ ಭಾರತ ಮೊದಲ ಇನ್ನಿಂಗ್ಸ್​ನಲ್ಲಿ ಮಾಡಿದ್ದ ರನ್ ತಲುಪಲಾಗದೆ ಹೀನಾಯ ಸೋಲನುಭವಿಸಿತು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments