ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್​ ವಿಧಿವಶ

0
46

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್​​​​​​​ ಕಾರ್ನಾಡ್​ (81), ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

‘ಸಮಗ್ರ ಸಾಹಿತ್ಯಕ್ಕೆ ಜ್ಞಾನಪೀಠ ಪ್ರಶಸ್ತಿ ಪಡೆದಿದ್ದ ಕಾರ್ನಾಡ್ ಅವರು ‘ಒಂದಾನೊಂದು ಕಾಲದಲ್ಲಿ’, ‘ಕಾಡು’, ‘ಕಾನೂರು ಹೆಗ್ಗಡತಿ’, ತಬ್ಬಲಿಯು ನೀನಾದೆ ಮಗನೇ ಚಿತ್ರಗಳನ್ನು ನಿರ್ದೇಶಿಸಿದ್ದರು. ‘ಆ ದಿನಗಳು’ ಚಿತ್ರಕ್ಕೆ ಚಿತ್ರಕಥೆಯನ್ನೂ ಬರೆದಿದ್ದರು. ‘ಉತ್ಸವ’, ‘ಗೋಧೂಳಿ’, ಎಂಬ ಹಿಂದಿ ಚಿತ್ರಗಳನ್ನು ನಿರ್ದೇಶಿಸಿದ್ದರು. ಕುವೆಂಪು ಅವರ ‘ಕಾನೂರು ಸುಬ್ಬಮ್ಮ ಹೆಗ್ಗಡತಿ’ ಹಾಗೂ ಯು. ಆರ್​. ಅನಂತಮೂರ್ತಿ ಅವರ ‘ಸಂಸ್ಕಾರ’, ಇಬ್ಬರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕಾದಂಬರಿಗಳನ್ನು ಸಿನಿಮಾ ಮಾಡಿದ ಏಕೈಕ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರೆಂಬ ಗೌರವಕ್ಕೆ ಕಾರ್ನಾಡ್ ಪಾತ್ರರಾಗಿದ್ದಾರೆ. ಇವರ ಸಾಹಿತ್ಯ ಸೇವೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ, ಪದ್ಮಶ್ರೀ, ಪದ್ಮಭೂಷಣ ಸೇರಿ ಹಲವು ಪ್ರಶಸ್ತಿಗಳು ಸಂದಿವೆ.

LEAVE A REPLY

Please enter your comment!
Please enter your name here