Home ಕ್ರೀಡೆ P.Cricket ‘ಚೆನ್ನೈನ ಚಪಾಕ್‌ನಲ್ಲಿ ಭಾರತದ ಸ್ಪಿನ್ನರ್‌ಗಳ‌ ಮೋಡಿ’

‘ಚೆನ್ನೈನ ಚಪಾಕ್‌ನಲ್ಲಿ ಭಾರತದ ಸ್ಪಿನ್ನರ್‌ಗಳ‌ ಮೋಡಿ’

ಚೆನ್ನೈ: ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್​ ಪಂದ್ಯದಲ್ಲಿ ಭಾರತ-ಇಂಗ್ಲೆಂಡ್ ಮುನ್ನಡೆಗೆ ಪ್ರಬಲ ಪೈಪೋಟಿ ನಡೆಸಿವೆ. ಭಾರತವನ್ನ 329 ರನ್​​ಗೆ ನಿಯಂತ್ರಿಸಿದ ಖುಷಿಯಲ್ಲಿದ್ದ ಪ್ರವಾಸಿ ತಂಡಕ್ಕೆ ಭಾರತೀಯ ಬೌಲರ್​​ಗಳು ಸಿಂಹಸ್ವಪ್ನರಾದರು.

ಆರಂಭಿಕ ಬರ್ನ್ಸ್​​​​ ಮೊದಲ ಓವರ್​​ನಲ್ಲೇ ನಿರ್ಗಮಿಸಿದ್ರೆ, ಡೊಮಿನಿಕ್​ ಸಿಬ್ಲಿಗೆ ಅಶ್ವಿನ್ ಪೆವಿಲಿಯನ್ ದಾರಿ ತೋರಿಸಿದ್ರು. ಮೊದಲ ಟೆಸ್ಟ್ ಹಿರೋ ನಾಯಕ ಜೋರೂಟ್ ಸ್ಪಿನ್ನರ್ ಅಕ್ಷರ್ ಪಟೇಲ್​​ ಮೋಡಿಗೆ ಬಲಿಯಾದರು. ಬೋಜನ ವಿರಾಮಕ್ಕೂ ಮೊದಲು ಇಂಗ್ಲೆಂಡ್ 4 ವಿಕೆಟ್ ಕಳೆದುಕೊಂಡು 39 ರನ್​ಗಳಿಸಿತ್ತು. ಭೋಜನ ವಿರಾಮದ ಬಳಿಕವೂ ಭಾರತೀಯ ಬೌಲರ್​ಗಳ ಪರಾಕ್ರಮ ಮುಂದುವರೆದಿದ್ದು, ಇಂಗ್ಲೆಂಡ್​ 5 ವಿಕೆಟ್ ಕಳೆದುಕೊಂಡು 65 ರನ್​ಗಳಿಸಿದೆ.

ಇದಕ್ಕೂ ಮುನ್ನ ಮೊದಲ ದಿನದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 300 ರನ್​ಗಳಿಸಿದ್ದ ಟೀಂ ಇಂಡಿಯಾ ಇಂದು 29 ರನ್​ ಸೇರಿಸುವಷ್ಟರಲ್ಲಿ ಉಳಿದ 4 ವಿಕೆಟ್ ಕಳೆದುಕೊಳ್ತು. ಒಂದು ಕಡೆ ವಿಕೆಟ್ ಕೀಪರ್ ರಿಷಬ್ ಪಂತ್ ಏಕಾಂಗಿಯಾಗಿ ಹೋರಾಟ ಮಾಡಿ ಅರ್ಧಶತಕಗಳಿಸಿದ್ರು. ಇನ್ನೊಂದು ತುದಿಯಲ್ಲಿ ಪಂತ್​ಗೆ ಬೆಂಬಲ ಸಿಗದ ಪರಿಣಾಮ ಭಾರತ 239 ರನ್​ಗೆ ಎಲ್ಲಾ ವಿಕೆಟ್ ಕಳೆದುಕೊಳ್ತು. ಭಾರತದ ಪರ ರೋಹಿತ್ ಶಮಾ 161, ರಹಾನೆ 67, ಪಂತ್ 58 ರನ್ ಕಾಣಿಕೆ ನೀಡಿದ್ರು, ಇಂಗ್ಲೆಂಡ್ ಪರ ಸ್ಪಿನ್ನರ್ ಮೋಹಿನ್ ಅಲಿ 4, ಓಲಿ ಸ್ಟೋನ್ 3, ಜ್ಯಾಕ್ ಲೀಚ್ ಎರಡು ವಿಕೆಟ್ ಪಡೆದುಕೊಂಡ್ರು. ಇತ್ತೀಚಿನ ವರದಿಗಳು ಬಂದಾಗ ಇಂಗ್ಲೆಂಡ್ 6 ವಿಕೆಟ್ ಕಳೆದುಕೊಂಡು 87 ರನ್​ಗಳಿಸಿದೆ.

LEAVE A REPLY

Please enter your comment!
Please enter your name here

- Advertisment -

Most Popular

‘ಡಿಜಿಟಲ್‌ ಮೀಡಿಯಾಗೆ ಹೊಸ ಗೈಡ್‌ಲೈನ್ಸ್ ‘

ಬೆಂಗಳೂರು: ಸೋಶಿಯಲ್ ಮೀಡಿಯಾಗಳಿಗೆ ಮೇಲೆ ಕೇಂದ್ರ ಸರ್ಕಾರ ಮೂಗುದಾರ ಹಾಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆಗಳು ಹೆಚ್ಚಾಗುತ್ತಿವೆ. ನಿಂಧನೆ ಮಾಡುವಂತಹ ಪೋಸ್ಟ್ ಗಳನ್ನು ನಿರ್ಬಂಧಿಸಬೇಕು ಎಂದು ಕೇಂದ್ರ ಸರ್ಕಾರ ಸೋಶಿಯಲ್ ಮೀಡಿಯಾ, ಡಿಜಿಟಲ್ ಮೀಡಿಯಾಗೆ...

ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನಡೆ: ಸುನಂದಾ

ಮೈಸೂರು: ಮೈಸೂರು ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಸೋತ ಹಿನ್ನೆಲೆಯಲ್ಲಿ‌ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಕಣ್ಣೀರು ಹಾಕಿದ್ದಾರೆ. ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನೆಡೆಯಾಗಿದೆ. ನಾನು ಮೇಯರ್ ಆಗುತ್ತೇನೆ ಅಂತ ತುಂಬಾ‌ ನಿರೀಕ್ಷೆ ಇಟ್ಟುಕೊಂಡಿದ್ದೆ....

‘ಗ್ರಾಮಸ್ಥರ ಕೆರೆ ನಿರ್ಮಾಣಕ್ಕೆ ನಿನಾಸಂ ಸತೀಶ್ ಮೆಚ್ಚುಗೆ’

ಶಿವಮೊಗ್ಗ: ಗ್ರಾಮದ ಜನರೇ ಸೇರಿಕೊಂಡು, ಗ್ರಾಮದ ಕೆರೆಗಳನ್ನು ಅಭಿವೃದ್ಧಿಗೊಳಿಸಿದ ಮುತ್ತಲ ಗ್ರಾಮಕ್ಕೆ ನಟ ನೀನಾಸಂ ಸತೀಶ್ ಭೇಟಿ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುತ್ತಲ ಗ್ರಾಮದಲ್ಲಿ ಎರಡು ಕೆರೆಗಳನ್ನು...

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ: ಈಶ್ವರಪ್ಪ

ವಿಜಯಪುರ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯಪುರದಲ್ಲಿ ಗ್ರಾಮೀಣಾಬಿವೃದ್ಧಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಹೋದಲೆಲ್ಲಾ ಮುಂದಿನ ಸಿಎಂ ನಾನೇ ಅಂತಾ ಹೇಳ್ತಾರೆ. ಸಿದ್ದರಾಮಯ್ಯ ಹಗಲು-ರಾತ್ರಿ...

Recent Comments