ನವದೆಹಲಿ: ಕಿಲ್ಲರ್ ಕೊರೋನಾ ವೈರಸ್ಗೆ ಇಡೀ ದೇಶವೇ ತತ್ತರಿಸಿ ಹೋಗಿದ್ದು, ದಿನ ಕಳೆದಂತೆ ಕೊರೋನಾ ಸೋಂಕಿತರ ಸಂಖ್ಯೆಯು ಹೆಚ್ಚಾಗುತ್ತಿದೆ. ಕೇವಲ 12 ಗಂಟೆಯಲ್ಲಿ 547 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6 ಸಾವಿರ ಗಡಿ ದಾಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟು 6,412 ಕೇಸ್ಗಳು ದೃಢಪಟ್ಟಿದೆ. ಅದರಲ್ಲಿ 504 ಮಂದಿ ಗುಣಮುಖರಾಗಿದ್ದು, ಇನ್ನೂ 5,709 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 12 ಗಂಟೆಯಲ್ಲಿ ಒಟ್ಟು 30 ಮಂದಿ ಈ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 199 ಕ್ಕೇರಿಕೆಯಾಗಿದೆ.
ಸೋಂಕಿತರ ಪಟ್ಟಿಯಲ್ಲಿ ಮಹಾರಾಷ್ಟ್ರ ಮೊದಲನೇ ಸ್ಥಾನದಲ್ಲಿದ್ದು, ಸೋಂಕಿತರ ಸಂಖ್ಯೆ 1,364ಕ್ಕೆ ಏರಿಕೆಯಾಗಿದೆ. ತಮಿಳುನಾಡು 834 ಪ್ರಕರಣ ಹಾಗೂ ದೆಹಲಿ 720 ಮಂದಿ ಸೋಂಕಿತರು ಇದ್ದಾರೆ.