ಬೆಂಗಳೂರು: ಲಾಕ್ಡೌನ್ನಲ್ಲಿ ಹಂತ ಹಂತವಾಗಿ ಸಡಿಲಿಕೆ ತರುತ್ತಿರುವ ಸರ್ಕಾರ, ಅಂತಾರಾಜ್ಯ ಬಸ್ ಸಂಚಾರಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಜೂನ್ 17 ರ ಬಳಿಕ ಅಂತಾರಾಜ್ಯ ಬಸ್ ಸಂಚಾರ ಪ್ರಾರಂಭವಾಗಲಿದೆ. ಎರಡೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಬಸ್ ಸಂಚರಿಸುತ್ತಿದ್ದು, ಆಂಧ್ರಪ್ರದೇಶ –ತೆಲಂಗಾಣ ಬಸ್ ಸಂಚರಿಸಲಿದೆ. ಈಗಾಗಲೇ ಅಂತಾರಾಜ್ಯ ಪ್ರಯಾಣಕ್ಕೆ ಬುಕ್ಕಿಂಗ್ ಸೇವೆಯನ್ನು ಕೆಎಸ್ಆರ್ಟಿಸಿ ಆರಂಭಿಸಿದೆ. ಮಹಾರಾಷ್ಟ್ರ ಹೊರತುಪಡಿಸಿ ಎಲ್ಲಾ ರಾಜ್ಯಗಳಿಗೆ ಬಸ್ ಸೇವೆ ಆರಂಭವಾಗಲಿದೆ ಎಂದು ಕೆಎಸ್ಆರ್ಟಿಸಿ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.