Home ದೇಶ-ವಿದೇಶ ಭಾರತೀಯ  ಉಡುಗೆತೊಟ್ಟು  ನೊಬೆಲ್ ಪ್ರಶಸ್ತಿ  ಸ್ವೀಕರಿಸಿದ ಬ್ಯಾನರ್ಜಿ

ಭಾರತೀಯ  ಉಡುಗೆತೊಟ್ಟು  ನೊಬೆಲ್ ಪ್ರಶಸ್ತಿ  ಸ್ವೀಕರಿಸಿದ ಬ್ಯಾನರ್ಜಿ

ಸ್ಟಾಕ್ ಹೋಂ : ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಅವರು ಇಂದು ಸ್ವಿಡನ್ ದೇಶದ ಸ್ಟಾಕ್ ಹೋಂ ನಗರದಲ್ಲಿ ನೊಬೆಲ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಜೊತೆಗೆ ಅವರ ಪತ್ನಿ ಎಸ್ತರ್ ಡೆಪ್ಲೊ ಹಾಗೂ ಹಾವರ್ಡ ವಿವಿ  ಅರ್ಥಶಾಸ್ತ್ರಜ್ಞ  ಮೈಕಲ್ ಅವರಿಗೂ ಪ್ರಶಸ್ತಿಯನ್ನು ಪ್ರದಾನ ಮಾಡಲಾಹಿತು . ಅರ್ಥಶಾಸ್ತ್ರ ವಿಭಾಗದ 2019 ನೊಬೆಲ್ ಪ್ರಶಸ್ತಿಯನ್ನು ಈ ಮೂವರಿಗೂ ಹಂಚಲಾಗಿದೆ.

ಈ ಸರಳ ಸಮಾರಂಭದಲ್ಲಿ ಅಭಿಜಿತ್ ಬ್ಯಾನರ್ಜಿ ಅವರು ಭಾರತೀಯ ಶೈಲಿಯ  ಉಡುಪಾದ ದೋತಿ ಹಾಗೂ ಕುರ್ತಾ ಧರಿಸಿ ಪ್ರಶಸ್ತಿ ಸ್ವೀಕರಿಸಿ ಎಲ್ಲರ ಗಮನ ಸೆಳೆದರು . ಅವರ ಪತ್ನಿ ಎಸ್ತರ್ ಕೂಡ ಸೀರೆ ಧರಿಸಿದ್ದು ಸಮಾರಂಭದಲ್ಲಿ ವಿಶೇಷವಾಗಿತ್ತು. ಜಾಗತಿಕ ಮಟ್ಟದಲ್ಲಿ ಬಡತನ ನಿರ್ಮೂಲನೆಗೆ ಸರ್ಕಾರಗಳು ಏನು ಮಾಡಬೇಕು ? ಎಂಬುದನ್ನು ಅವರ  ಸಿದ್ದಾಂತದಲ್ಲಿ ತೋರಿಸಿ ಕೊಟ್ಟಿದಕ್ಕೆ ನೊಬೆಲ್ ಪ್ರಶಸ್ತಿಗೆ  ಅಯ್ಕೆಯಾಗಿದ್ದರು . ಪ್ರಶಸ್ತಿಯ ಒಟ್ಟು ಮೊತ್ತ 6 ಕೋಟಿ ರುಪಾಯಿಯಾಗಿದೆ .

ಮೂಲತಃ ಕೊಲ್ಕತ್ತಾದವರಾದ ಅಭಿಜಿತ್ ಬ್ಯಾನರ್ಜಿ ಅಮೆರಿಕದ ಮೆಸ್ಸಾಚುಯೆಟ್ಸ ವಿವಿಯಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ದೆಹಲಿಯ ಜವಾಹರ್ ಲಾಲ್ ನೆಹರು ವಿವಿಯಿಂದ ಪದವಿ ಪಡೆದು, ವಿದೇಶದಲ್ಲಿ ಸಾಕಷ್ಟು ಸಂಶೋಧನೆ ನಡೆಸಿ, ಒಬ್ಬ ಪ್ರಖ್ಯಾತ ಅರ್ಥಶಾಸ್ತ್ರಜ್ಞ ಎಂದು ಹೆಸರು ಮಾಡಿದ್ದಾರೆ .

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments