Home ಕ್ರೀಡೆ P.Cricket 4ನೇ ಬಾರಿ ಚಾಂಪಿಯನ್ ಪಟ್ಟಕ್ಕಾಗಿ ಚೆನ್ನೈ-ಮುಂಬೈ ಬಿಗ್ ಫೈಟ್​

4ನೇ ಬಾರಿ ಚಾಂಪಿಯನ್ ಪಟ್ಟಕ್ಕಾಗಿ ಚೆನ್ನೈ-ಮುಂಬೈ ಬಿಗ್ ಫೈಟ್​

ಐಪಿಎಲ್ 12ನೇ ಆವೃತ್ತಿ ನೋಡು ನೋಡುತ್ತಿದಂತೆ ಮುಗಿದೇ ಬಿಡ್ತಿದೆ. ಇಂದು ಫೈನಲ್​ನಲ್ಲಿ ಟೀಮ್ ಇಂಡಿಯಾದ ಮಾಜಿ ಕ್ಯಾಪ್ಟನ್​ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಹಿಟ್​ ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮಾ ಮುಂದಾಳತ್ವದ ಮುಂಬೈ ಇಂಡಿಯನ್ಸ್​ ಹೈದರಾಬಾದ್​ನಲ್ಲಿ ಮುಖಾಮುಖಿಯಾಗುತ್ತಿವೆ.
ಚೆನ್ನೈ ಮತ್ತು ಮುಂಬೈ ಎರಡೂ ತಂಡಗಳು ತಲಾ ಮೂರು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿವೆ. ಇಂದು ಗೆದ್ದವರು 4ನೇ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಲಿದ್ದಾರೆ. 2010, 2011 ಮತ್ತು 2018ರಲ್ಲಿ ಚೆನ್ನೈ ಚಾಂಪಿಯನ್ ಆಗಿತ್ತು. 2013, 2015 ಮತ್ತು 2017ರಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು.
ಇನ್ನು ಚೆನ್ನೈ ಮತ್ತು ಮುಂಬೈ ನಡುವಿನ ಹಣಾಹಣಿ ವಿಚಾರಕ್ಕೆ ಬರೋದಾದ್ರೆ ಒಟ್ಟು 27 ಬಾರಿ ಈ 2 ತಂಡಗಳು ಮುಖಾಮುಖಿಯಾಗಿವೆ. ಅವುಗಳಲ್ಲಿ ಮುಂಬೈ 16 ಬಾರಿ, ಚೆನ್ನೈ 11 ಬಾರಿ ಗೆಲುವು ಸಾಧಿಸಿವೆ. ಈ ಬಾರಿ ಮೂರು ಬಾರಿ ಈ ಟೀಮ್​ಗಳು ಸೆಣೆಸಿದ್ದು, ಮೂರು ಮ್ಯಾಚ್​ನಲ್ಲೂ ಮುಂಬೈ ಗೆದ್ದು ಬೀಗಿದೆ.
ಒಟ್ಟಿನಲ್ಲಿ ಎರಡು ಪ್ರಬಲ ತಂಡಗಳ ನಡುವೆ ಚಾಂಪಿಯನ್ ಪಟ್ಟಕ್ಕಾಗಿ ಬಿಗ್ ಫೈಟ್ ನಡೆಯಲಿದ್ದು.. 4ನೇ ಬಾರಿ ಯಾರು ಪ್ರಶಸ್ತಿಗೆ ಮುತ್ತಿಕ್ಕುತ್ತಾರೆ ಅನ್ನೋದು ಕುತೂಹಲ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments