Home ರಾಜ್ಯ ನಿರಂತರ ಜ್ಯೋತಿ ಯೋಜನೆಯಲ್ಲಿ ಅವ್ಯವಹಾರ: ಕೆ.ಎಸ್. ಈಶ್ವರಪ್ಪ

ನಿರಂತರ ಜ್ಯೋತಿ ಯೋಜನೆಯಲ್ಲಿ ಅವ್ಯವಹಾರ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಅಧಿಕಾರಿಗಳ ವಿರುದ್ಧ ಹರಿಹಾಯ್ದರು. 

ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರಂತರ ಜ್ಯೋತಿ ಯೋಜನೆ ಅನುಷ್ಟಾನ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ನಿರಂತರ ಜ್ಯೋತಿ ವಿದ್ಯುತ್ ಯೋಜನೆ‌ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ.  ಸುಮಾರು 260 ಕೋಟಿ ಯೋಜನೆಯಲ್ಲಿ 60 ಕೋಟಿಗೂ ಅಧಿಕ ಅವ್ಯವಹಾರ ನಡೆದಿದೆ. ಕಾಮಗಾರಿ ನಡೆಸದೇ ಗುತ್ತಿಗೆದಾರ ಬಿಲ್ ಪಡೆದಿದ್ದಾರೆ. ಅವ್ಯವಹಾರ ನಡೆದಿರುವ ಬಗ್ಗೆ ಸ್ವತಃ ಸಚಿವರೇ ಆರೋಪ ಮಾಡಿದರು.  ಮತ್ತೆ ಒಂದು ವಾರದ ನಂತರ ಸಭೆ ನಡೆಸುತ್ತೇನೆ.  ಅಷ್ಟರೊಳಗೆ ಇವೆಲ್ಲವನ್ಙೂ ಸರಿಪಡಿಸಿಕೊಳ್ಳುವಂತೆ ಎಚ್ಚರಿಕೆ ನೀಡಿದರು. ಸರಿಪಡಿಸಿಕೊಳ್ಳದಿದ್ದರೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಕಾಮಗಾರಿ ಅನುಷ್ಠಾನದ ಬಗ್ಗೆ ಹಿರಿಯ ಅಧಿಕಾರಿಗಳು ನಿಗಾ ವಹಿಸಬೇಕು. ಫೀಡರ್‍ಗಳಲ್ಲಿ ಅಳವಡಿಸಿರುವ ಕಂಬಗಳ ಬಗ್ಗೆ ಸರಿಯಾಗಿ ಲೆಕ್ಕ ಇರುವುದಿಲ್ಲ. ಪ್ರತಿ ಕಂಬಗಳಿಗೂ ಸಂಖ್ಯೆಯನ್ನು ನಮೂದಿಸಬೇಕು. ಅಧಿಕಾರಿಗಳು ಎಲ್ಲಾ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಬೇಕು. ಕೆಲಸ ನಿರ್ವಹಿಸಿದ ಕಾರ್ಮಿಕರಿಗೆ ಸರಿಯಾದ ವೇತನ ಮತ್ತು ಭವಿಷ್ಯ ನಿಧಿ ಸೌಲಭ್ಯ ನೀಡದಿರುವ ಬಗ್ಗೆ ದೂರುಗಳು ಬಂದಿದ್ದು, ಈ ಕುರಿತು ಪರಿಶೀಲಿಸಿ ಎಲ್ಲಾ ಕಾರ್ಮಿಕರಿಗೆ ಸರಿಯಾಗಿ ವೇತನ ಮತ್ತಿತರ ಸೌಲಭ್ಯ ಒದಗಿಸಬೇಕು. ಗುತ್ತಿಗೆದಾರನ ಯಾವುದೇ ಬಿಲ್ಲುಗಳನ್ನು ಅನುಮೋದಿಸುವುದನ್ನು ತಡೆಹಿಡಿಯಬೇಕು. ಮಾರ್ಗಸೂಚಿಯನ್ನು ಉಲ್ಲಂಘಿಸಿ ಕಾಮಗಾರಿ ಅನುಷ್ಟಾನಗೊಳಿಸಿದವರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸಚಿವರು ತಾಕೀತು ಮಾಡಿದರು.

LEAVE A REPLY

Please enter your comment!
Please enter your name here

- Advertisment -

Most Popular

‘ಡಿಜಿಟಲ್‌ ಮೀಡಿಯಾಗೆ ಹೊಸ ಗೈಡ್‌ಲೈನ್ಸ್ ‘

ಬೆಂಗಳೂರು: ಸೋಶಿಯಲ್ ಮೀಡಿಯಾಗಳಿಗೆ ಮೇಲೆ ಕೇಂದ್ರ ಸರ್ಕಾರ ಮೂಗುದಾರ ಹಾಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆಗಳು ಹೆಚ್ಚಾಗುತ್ತಿವೆ. ನಿಂಧನೆ ಮಾಡುವಂತಹ ಪೋಸ್ಟ್ ಗಳನ್ನು ನಿರ್ಬಂಧಿಸಬೇಕು ಎಂದು ಕೇಂದ್ರ ಸರ್ಕಾರ ಸೋಶಿಯಲ್ ಮೀಡಿಯಾ, ಡಿಜಿಟಲ್ ಮೀಡಿಯಾಗೆ...

ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನಡೆ: ಸುನಂದಾ

ಮೈಸೂರು: ಮೈಸೂರು ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಸೋತ ಹಿನ್ನೆಲೆಯಲ್ಲಿ‌ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಕಣ್ಣೀರು ಹಾಕಿದ್ದಾರೆ. ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನೆಡೆಯಾಗಿದೆ. ನಾನು ಮೇಯರ್ ಆಗುತ್ತೇನೆ ಅಂತ ತುಂಬಾ‌ ನಿರೀಕ್ಷೆ ಇಟ್ಟುಕೊಂಡಿದ್ದೆ....

‘ಗ್ರಾಮಸ್ಥರ ಕೆರೆ ನಿರ್ಮಾಣಕ್ಕೆ ನಿನಾಸಂ ಸತೀಶ್ ಮೆಚ್ಚುಗೆ’

ಶಿವಮೊಗ್ಗ: ಗ್ರಾಮದ ಜನರೇ ಸೇರಿಕೊಂಡು, ಗ್ರಾಮದ ಕೆರೆಗಳನ್ನು ಅಭಿವೃದ್ಧಿಗೊಳಿಸಿದ ಮುತ್ತಲ ಗ್ರಾಮಕ್ಕೆ ನಟ ನೀನಾಸಂ ಸತೀಶ್ ಭೇಟಿ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುತ್ತಲ ಗ್ರಾಮದಲ್ಲಿ ಎರಡು ಕೆರೆಗಳನ್ನು...

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ: ಈಶ್ವರಪ್ಪ

ವಿಜಯಪುರ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯಪುರದಲ್ಲಿ ಗ್ರಾಮೀಣಾಬಿವೃದ್ಧಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಹೋದಲೆಲ್ಲಾ ಮುಂದಿನ ಸಿಎಂ ನಾನೇ ಅಂತಾ ಹೇಳ್ತಾರೆ. ಸಿದ್ದರಾಮಯ್ಯ ಹಗಲು-ರಾತ್ರಿ...

Recent Comments