Home ಕ್ರೀಡೆ P.Cricket ಟಿ20 ವರ್ಲ್ಡ್​​ಕಪ್​​ನಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಹೆಗಲಿಗೆ ಹೊಸ ಹೊಣೆ?

ಟಿ20 ವರ್ಲ್ಡ್​​ಕಪ್​​ನಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಹೆಗಲಿಗೆ ಹೊಸ ಹೊಣೆ?

ಟೀಮ್ ಇಂಡಿಯಾ ಓಪನರ್, ಕನ್ನಡಿಗ ಕೆ.ಎಲ್ ರಾಹುಲ್​ಗೆ ಮುಂಬರುವ ಟಿ20 ವರ್ಲ್ಡ್​​ಕಪ್​​ನಲ್ಲಿ ಹೊಸ ಹೊಣೆ ನೀಡಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಸೀಮಿತ ಓವರ್​ಗಳ ಮ್ಯಾಚ್​ನಲ್ಲಿ ರಾಹುಲ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಒಡಿಐ ವರ್ಲ್ಡ್​ಕಪ್ ಬಳಿಕ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅನುಪಸ್ಥಿತಿಯಲ್ಲಿ ಖಾಯಂ ವಿಕೆಟ್​ ಕೀಪರ್ ಆಗಿ ತಂಡದಲ್ಲಿರುವ ಯುವ ಆಟಗಾರ ರಿಷಬ್ ಪಂತ್ ಉತ್ತಮ ಪ್ರದರ್ಶನ ನೀಡುವಲ್ಲಿ ಸಂಪೂರ್ಣ ಎಡವಿದ್ದಾರೆ. ಇನ್ನು ಕೇರಳದ ಸಂಜು ಸಾಮ್ಸನ್ ಬಗ್ಗೆ ಅದೇಕೋ ಮ್ಯಾನೇಜ್ಮೆಂಟ್​ ಒಲವು ತೋರುತ್ತಿಲ್ಲ.
ಕನ್ನಡಿಗ ಕೆ.ಎಲ್ ರಾಹುಲ್ ಬ್ಯಾಟಿಂಗ್​ನಲ್ಲಿ ಮಾತ್ರವಲ್ಲದೆ ವಿಕೆಟ್​ ಕೀಪಿಂಗ್​ನಲ್ಲೂ ತಂಡಕ್ಕೆ ನೆರವಾಗಬಲ್ಲರೆಂಬ ವಿಶ್ವಾಸ ಬಿಸಿಸಿಐಗಿದೆ. ಈಗಾಲೇ ದೇಶಿಯ ಟೂರ್ನಿಗಳಲ್ಲಿ ಹಾಗೂ ಐಪಿಎಲ್​ನಲ್ಲಿ ವಿಕೆಟ್​ ಕೀಪರ್ ಆಗಿ ಕ್ಲಿಕ್ ಆಗಿರೋ ರಾಹುಲ್ ಅವರನ್ನೇ ಟಿ20ಗೆ ಖಾಯಂ ವಿಕೆಟ್​ ಕೀಪರ್ ಆಗಿ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ರಾಹುಲ್​​ಗೆ ಹೆಚ್ಚುವರಿಯಾಗಿ ವಿಕೆಟ್​ ಕೀಪಿಂಗ್ ಜವಬ್ದಾರಿ ನೀಡಿದಲ್ಲಿ ತಂಡಕ್ಕೆ ಇನ್ನೊಬ್ಬ ಬ್ಯಾಟ್ಸ್​ಮನ್ ಅಥವಾ ಆಲ್​ರೌಂಡರ್ ಅನ್ನು ಸೇರಿಸಿಕೊಳ್ಳಲು ಅವಕಾಶ ಕೂಡ ಸಿಗುತ್ತದೆ. ಆದ್ದರಿಂದ ರಾಹುಲ್​ ಮುಂದಿನ ದಿನಗಳಲ್ಲಿ ಬ್ಯಾಟಿಂಗ್ ಜೊತೆಗೆ ವಿಕೆಟ್​ ಕೀಪರ್ ಆಗಿಯೂ ಜವಬ್ದಾರಿ ನಿಭಾಯಿಸುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments