Home ರಾಜ್ಯ ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಶಿವಮೊಗ್ಗ : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಶೀಘ್ರದಲ್ಲೇ ಇಳಿಮುಖ ಕಾಣಲಿ ಎಂದು ಸಚಿವ ಈಶ್ವರಪ್ಪ, ಹೋಮದ ಮೊರೆ ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ, ಏರಿಳಿತ ಕಾಣುತ್ತಿರುವ ಹಿನ್ನೆಲೆಯಲ್ಲಿ, ಸೋಂಕಿತರ ಸಂಖ್ಯೆ ಶೀಘ್ರದಲ್ಲೇ ಕಡಿಮೆಯಾಗಲಿ ಎಂದು ದೇವರಲ್ಲಿ ಅವರು ಪ್ರಾರ್ಥಿಸಿದ್ದಾರೆ. 

ಶಿವಮೊಗ್ಗದ ಶುಭಮಂಗಳ ಸಮುದಾಯ ಭವನದ ಆವರಣದಲ್ಲಿರುವ ದೇವಾಲಯದಲ್ಲಿ ಧನ್ವಂತರಿ ಹೋಮ‌ ಆಯೋಜಿಸಿ ಪೂಜೆ ನೆರವೇರಿಸಿದ್ದಾರೆ. ಸೇವಾ ಭಾರತಿ ಹಾಗೂ ಕೋವಿಡ್ ಸುರಕ್ಷಾಪಡೆ ವತಿಯಿಂದ ಆಯೋಜಿಸಿದ್ದ ಧನ್ವಂತರಿ ಹೋಮದಲ್ಲ, ಸಚಿವ ಈಶ್ವರಪ್ಪ ಕುಟುಂಬ ಭಾಗವಹಿಸಿ, ಪೂಜೆ ನೆರವೇರಿಸಿದ್ದಾರೆ. ಈಶ್ವರಪ್ಪ ದಂಪತಿ ಸಮೇತ ಪೂರ್ಣಾಹುತಿ ನೆರವೇರಿಸಿ, ಏನಾದರೂ ಮಾಡಿ, ಕೊರೋನಾ ಸೋಂಕಿತರ ಸಂಖ್ಯೆ ಇಳಿಸಪ್ಪಾ ದೇವ್ರೇ ಅಂತಾ ಸಚಿವ ಈಶ್ವರಪ್ಪ ದೇವರ ಮೊರೆ ಹೋಗಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments