Home ಸಿನಿ ಪವರ್ ಫಿಲಂ ಚೇಂಬರ್ ಮೆಟ್ಟಿಲೇರಿದ ಪ್ರೇಮ್​..!

ಫಿಲಂ ಚೇಂಬರ್ ಮೆಟ್ಟಿಲೇರಿದ ಪ್ರೇಮ್​..!

ನಿರ್ಮಾಪಕ ಕನಕಪುರ ಶ್ರೀನಿವಾಸ್ ಹಾಗೂ ನಿರ್ದೇಶಕ ಜೋಗಿ ಪ್ರೇಮ್ ನಡುವಿನ ಭಿನ್ನಾಭಿಪ್ರಾಯ ಫಿಲಂ ಚೇಂಬರ್​ಗೆ ತಲುಪಿದೆ. ಶ್ರೀನಿವಾಸ್​ನಿಂದ ತನಗೆ ಮಾನಸಿಕ ಹಿಂಸೆಯಾಗಿದೆ ಅಂತ ಪ್ರೇಮ್​ ವಾಣಿಜ್ಯ ಮಂಡಳಿಗೆ ದೂರು ಸಲ್ಲಿಸಿದ್ದಾರೆ.

ಕನಕಪುರ ಶ್ರೀನಿವಾಸ್​ ವರ್ತನೆ ಖಂಡಿಸಿ ಪ್ರೇಮ್​ ವಾಣಿಜ್ಯ ಮಂಡಳಿಯ ಮೆಟ್ಟಿಲೇರಿದ್ದಾರೆ. “ಶ್ರೀನಿವಾಸ್​ ನನ್ನನ್ನು ಕೆಟ್ಟ ಶಬ್ದಗಳಿಂದ ನಿಂದಿಸಿದ್ರು. ಒಂದಷ್ಟು ಹುಡುಗರನ್ನು ಕರೆತಂದು ಆಫೀಸ್​ ಮುಂದೆ ಗಲಾಟೆ ನಡೆಸಿದ್ರು. ಅಕ್ಕ- ಪಕ್ಕದ ನಿವಾಸಿಗಳಿಗೂ ತೊಂದರೆಯಾಗ್ತಿದೆ. ಇದರಿಂದ ನನಗೆ ಮಾನಸಿಕ ಹಿಂಸೆಯಾಗಿದೆ ಅಂತ ಪ್ರೇಮ್ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.

ನಿರ್ಮಾಪಕ ಕನಕಪುರ ಶ್ರೀನಿವಾಸ್​ ನಿನ್ನೆ ನಿರ್ದೇಶಕ ಜೋಗಿ ಪ್ರೇಮ್ ಮನೆಮುಂದೆ ಧರಣಿ ಮಾಡಿದ್ರು. ” ಪ್ರೇಮ್ ನನಗೆ ಕೊಡಬೇಕಾದ ಹಣವನ್ನು ಕೊಟ್ಟಿಲ್ಲ. ಅವರಿಂದ 4 ಲಕ್ಷ ರೂಪಾಯಿ ಸಿಗ್ಬೇಕಿದೆ. ಈಗ ಹಣ ಕೊಡದೆ ವಂಚಿಸ್ತಿದ್ದಾರೆ. ಹಣ ಕೊಡೋ ತನ್ಕ ಇಲ್ಲಿಂದ ಕದಲಲ್ಲ. ಪ್ರಾಣ ಬಿಡೋಕು ತಯಾರು” ಅಂತ ಗಲಾಟೆ ಮಾಡಿದ್ದರು.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments