ಬೆಂಗಳೂರು : ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬೆನ್ನಲ್ಲೇ ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಪರಮೇಶ್ವರ್ ಒಡೆತನದ ತುಮಕೂರಿನಲ್ಲಿರುವ ಸಿದ್ದಾರ್ಥ್ ಇಂಜಿನಿಯರಿಂಗ್ ಕಾಲೇಜು, ಪದವಿ ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೆ ನೆಲಮಂಗಲದಲ್ಲಿರುವ ಪರಂ ಒಡೆತನದ ಮೆಡಿಕಲ್ ಕಾಲೇಜು, ಸದಾಶಿವನಗರದ ನಿವಾಸದ ಮೇಲೂ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ.
ಈ ಬಗ್ಗೆ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ. ನಮ್ಮಲ್ಲಿ ತಪ್ಪುಗಳಿದ್ರೆ ದಾಳಿ ಮಾಡಲಿ ಎಂದಿದ್ದಾರೆ.
ಅಷ್ಟೇ ಅಲ್ಲದೆ ಕೇಂದ್ರ ಮಾಜಿ ಸಚಿವ ಆರ್.ಎಲ್ ಜಾಲಪ್ಪ ಒಡೆತನದ ಆಸ್ಪತ್ರೆ ಮೇಲೆ, ದೇವರಾಜ್ ಅರಸ್ ಮೆಡಿಕಲ್ ಕಾಲೇಜು ಮೇಲೆ, ಜಾಲಪ್ಪ ಪುತ್ರ ರಾಜೇಂದ್ರ ನಿವಾಸದ, ನೆಲಮಂಗಲ ಪುರಸಭೆ ಜೆಡಿಎಸ್ ಸದಸ್ಯ ಶಿವಕುಮಾರ್ ನಿವಾಸದ ಮೇಲೂ ಐಟಿ ಅಧಿಕಾರಿಗಳು ದಾಳಿ ನಡಸಿದ್ದಾರೆ.
ಡಿಕೆಶಿ ಬೆನ್ನಲ್ಲೇ ಮಾಜಿ ಡಿಸಿಎಂ ಪರಮೇಶ್ವರ್ಗೆ ಐಟಿ ಶಾಕ್..!
RELATED ARTICLES