ಕೊಡಗು : ನಟಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿರಾಜಪೇಟೆಯಲ್ಲಿರುವ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಹೈದರಾಬಾದ್ನಲ್ಲಿರುವ ರಶ್ಮಿಕಾಗೆ ಕೂಡಲೇ ವಿರಾಜಪೇಟೆಗೆ ಹೊರಟು ಬರುವಂತೆ ಸಮನ್ಸ್ ನೀಡಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ 10 ಅಧಿಕಾರಿಗಳು ದೌಡಾಯಿಸಿದ್ದು, ಕುಟುಂಬದವರಿಗೆ ಶಾಕ್ ನೀಡಿದೆ. ಕೇವಲ 24 ವಯಸ್ಸಿನ ರಶ್ಮಿಕಾ ಆದಾಯ ಕಳೆದೆರಡು ವರ್ಷಗಳಿಂದ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಆದಾಯಕ್ಕೆ ತಕ್ಕಂತೆ ತೆರಿಗೆ ಪಾವತಿಸಿಲ್ಲ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಸ್ಯಾಂಡಲ್ವುಡ್ ಮತ್ತು ಟಾಲಿವುಡ್ನಲ್ಲಿ ಹಿಟ್ ಸಿನಿಮಾಗಳನ್ನು ನೀಡಿರುವ ರಶ್ಮಿಕಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಐಷಾರಾಮಿ ಕಾರೊಂದನ್ನು ಖರೀದಿಸಿದ್ದರು.