Home ಕ್ರೀಡೆ P.Cricket ಕಾಲೀಸ್​, ಲಿಸಾ, ಜಹೀರ್​ಗೆ ಐಸಿಸಿ ಹಾಲ್​​ ಫೇಮ್​ ಗೌರವ..!

ಕಾಲೀಸ್​, ಲಿಸಾ, ಜಹೀರ್​ಗೆ ಐಸಿಸಿ ಹಾಲ್​​ ಫೇಮ್​ ಗೌರವ..!

ಸೌತ್ ಆಫ್ರಿಕಾ  ಮಾಜಿ ಆಲ್​ ರೌಂಡರ್ ಜಾಕ್​​ ಕಾಲೀಸ್​, ಆಸ್ಟ್ರೇಲಿಯಾ ಮಹಿಳಾ ತಂಡದ ನಾಯಕಿ ಲಿಸಾ ಸ್ಥಲೇಕರ್ ಹಾಗೂ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಜಹೀರ್​​​ ಅಬ್ಬಾಸ್​ ಐಸಿಸಿ ಹಾಲ್​ ಆಫ್ ಫೇಮ್ ಗೌರವಕ್ಕೆ ಪಾತ್ರರಾಗಿದ್ದಾರೆ.

ಜಾಕ್ ಕಾಲೀಸ್​ ಏಕದಿನ ಮತ್ತು ಟೆಸ್ಟ್​ ಕ್ರಿಕೆಟ್​ನಲ್ಲಿ 10 ಸಾವಿರ ರನ್ ಹಾಗೂ 250ಕ್ಕೂ ಹೆಚ್ಚು ವಿಕೆಟ್​ ಪಡೆದ ವಿಶ್ವದ ಏಕೈಕ ಕ್ರಿಕೆಟರ್..!  18 ವರ್ಷದ ತಮ್ಮ ಕ್ರಿಕೆಟ್ ವೃತ್ತಿ ಜೀವನದಲ್ಲಿ ಟೆಸ್ಟ್​ ಮತ್ತು ಏಕದಿನ ಎರಡೂ ಮಾದರಿಯಿಂದ ಒಟ್ಟು 25 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. 600ಕ್ಕೂ ಹೆಚ್ಚು ವಿಕೆಟ್ ಪಡೆದಿದ್ದಾರೆ.

ಲಿಸಾ ಸ್ಥಲೇಕರ್ ಆಸ್ಟ್ರೇಲಿಯಾ ಪರ 2 ಒಡಿಐ ವರ್ಲ್ಡ್​​ಕಪ್  ( 2005 ಮತ್ತು 2013 ) ಮತ್ತು 2 ಟಿ20 ವರ್ಲ್ಡ್​​​ಕಪ್​​ನಲ್ಲಿ (2010 ಮತ್ತು 2012) ಆಡಿದ್ದಾರೆ. 2001ರಲ್ಲಿ ಪದಾರ್ಪಣೆ ಮಾಡಿದ್ದ ಲಿಸಾ 2013ರಲ್ಲಿ ನಿವೃತ್ತಿ ಘೋಷಿಸಿದ್ದರು. 187 ಇಂಟರ್​ನ್ಯಾಷನಲ್ ಮ್ಯಾಚ್​ಗಳನ್ನು ಆಡಿ 4000ರನ್​ ಬಾರಿಸಿದ್ದಾರೆ, 200ಕ್ಕೂ ಹೆಚ್ಚು ವಿಕೆಟ್ ಪಡೆದಿದ್ದಾರೆ.

ಇನ್ನು ಪಾಕ್​ ಕ್ರಿಕೆಟಿಗ ಜಹೀರ್ ಅಬ್ಬಾಸ್, ಏಷ್ಯಾದಲ್ಲಿ 100 ಪ್ರಥಮ ದರ್ಜೆ ಶತಕ ಸಿಡಿಸಿದ ವಿಶ್ವದಾಖಲೆ ನಿರ್ಮಿಸಿದ್ದಾರೆ. ಒಂದೇ ಮ್ಯಾಚ್​ನ 2 ಇನ್ನಿಂಗ್ಸ್​​ಗಳಲ್ಲಿ 8 ಬಾರಿ ಶತಕ ಸಿಡಿಸಿದ ಹಾಗೂ ಒಂದ್ಯದ ಒಂದು ಇನ್ನಿಂಗ್ಸ್​ನಲ್ಲಿ ದ್ವಿಶತಕ ಹಾಗೂ ಮತ್ತೊಂದು ಇನ್ನಿಂಗ್ಸ್​ನಲ್ಲಿ ಶತಕವನ್ನು 4 ಬಾರಿ ದಾಖಲಿಸಿದ್ದಾರೆ. ಅಲ್ಲದೆ ಒಡಿಐನಲ್ಲಿ ಸತತ 3 ಶತಕ ಬಾರಿಸಿದ ವಿಶ್ವದ ಮೊದಲ ಕ್ರಿಕೆಟರ್ ಎಂಬ ಖ್ಯಾತಿ ಹೊಂದಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments