Home ರಾಜ್ಯ ಸಿಸಿಬಿಯಿಂದ ರೆಡ್ಡಿ ಆಪ್ತರು ವಶಕ್ಕೆ..!

ಸಿಸಿಬಿಯಿಂದ ರೆಡ್ಡಿ ಆಪ್ತರು ವಶಕ್ಕೆ..!

ನಿನ್ನೆಯಷ್ಟೇ ಲೋಕಸಭಾ ಬೈ ಎಲೆಕ್ಷನ್ ರಿಸೆಲ್ಟ್ ಬಂದಿದೆ. ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಅದ್ರಲ್ಲೂ ಮುಖ್ಯವಾಗಿ ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ  ಹೀನಾಯ ಸೋಲುಂಡಿದ್ದು, ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಅವ್ರಿಗೆ ತಲೆ ಎತ್ತೋಕೆ ಆಗ್ತಿಲ್ಲ. ಈ ನಡುವೆ ಜನಾರ್ದನ ರೆಡ್ಡಿ ಅವ್ರ ನೋಟು ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೆಡ್ಡಿಯ ಮೂವರು ಆಪ್ತರನ್ನು ಸಿಸಿಬಿ ಪೊಲೀರು ವಶಕ್ಕೆ ಪಡೆದಿದ್ದಾರೆ. ರೆಡ್ಡಿ ಕೂಡ ಅರೆಸ್ಟ್ ಆಗೋ ಭೀತಿಯಲ್ಲಿದ್ದಾರೆ ಅಂತ ಹೇಳಲಾಗ್ತಿದೆ.
ಬೆಂಗಳೂರಿನ ಆಂಬಿಡೆಂಟ್ ಮಾರ್ಕೆಂಟಿಂಗ್ ಲಿಮಿಟೆಡ್ ಅನ್ನೋ ಕಂಪನಿಯಿಲ್ಲಿ ರದ್ದಾದ 100 ಕೋಟಿ ರೂ ನೋಟುಗಳನ್ನು ವರ್ಗಾವಣೆ ಮಾಡ್ಕೊಂಡಿದ್ರು. ಅಷ್ಟೇ ಅಲ್ದೆ 57 ಕೆ.ಜಿ ಚಿನ್ನದ ಗಟ್ಟಿ ಖರೀದಿಸಿ ರೆಡ್ಡಿ ಡೀಲ್ ಮಾಡ್ಕೊಂಡಿದ್ರು ಅನ್ನೋ ಆರೋಪ ಕೇಳ್ಬಂದಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಆಂಬಿಡೆಂಟ್ ಕಂಪನಿಯ ಮಾಲೀಕ ಫರೀದ್, ಬಿಲ್ಡರ್ ಬ್ರಿಜೇಶ್, ರಮೇಶ್ ಕೊಠಾರಿ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ ಪ್ರಕರಣದ ತನಿಖೆ ಆಗ್ತಾ ಇದೆ. ಮಾಜಿ ಸಚಿವ ರೆಡ್ಡಿ ಹೈದರಾಬಾದ್ ನಲ್ಲಿದ್ದು, ಅಲ್ಲಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments