Home ರಾಜ್ಯ ಜೆಡಿಎಸ್​ ಪಕ್ಷದ ನೂತನ ಸಾರಥಿಯಾಗಿ ಹೆಚ್​.ಕೆ.ಕುಮಾರಸ್ವಾಮಿ ನೇಮಕ ಸಾಧ್ಯತೆ

ಜೆಡಿಎಸ್​ ಪಕ್ಷದ ನೂತನ ಸಾರಥಿಯಾಗಿ ಹೆಚ್​.ಕೆ.ಕುಮಾರಸ್ವಾಮಿ ನೇಮಕ ಸಾಧ್ಯತೆ

ಬೆಂಗಳೂರು : ಜೆಡಿಎಸ್​ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಸಕಲೇಶಪುರ ಕ್ಷೇತ್ರದ ಶಾಸಕ ಹೆಚ್​ .ಕೆ.ಕುಮಾರಸ್ವಾಮಿಯವರನ್ನು ನೇಮಕಮಾಡುವುದು ಬಹುತೇಕ ಖಚಿತವಾಗಿದೆ. ಇತ್ತೀಚೆಗಷ್ಟೆ ಹೆಚ್​ ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆನಂತರ ಜೆಡಿಎಸ್​ ಪಕ್ಷಕ್ಕೆ ಸಾರಥಿಯೇ ಇಲ್ಲದಂತಾಗಿತ್ತು. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಧು ಬಂಗಾರಪ್ಪ, ಬಸವರಾಜ್​ ಹೊರಟ್ಟಿ, ಹೆಚ್​. ಕೆ ಕುಮಾರಸ್ವಾಮಿ ಹೆಸರುಗಳು ರೇಸ್​ನಲ್ಲಿದ್ದವು. ಆದರೆ ಅಂತಿಮವಾಗಿ ಹೆಚ್​.ಕೆ ಕುಮಾರಸ್ವಾಮಿ ಜೆಡಿಎಸ್​ನ ನೂತನ ಸಾರಥಿಯಾಗುವುದು ಬಹುತೇಕ ಖಚಿತವಾಗಿದೆ. ಇನ್ನು ಕಾರ್ಯಾಧ್ಯಕ್ಷ ಸ್ಥಾನಕ್ಕೆ ಮಧು ಬಂಗಾರಪ್ಪ ಆಯ್ಕೆಯಾಗುವ ಸಾಧ್ಯತೆಯಿದ್ದು,  ಅಧಿಕೃತ ಘೋಷಣೆಯೊಂದೆ ಬಾಕಿ ಇದೆ. ಜೆಡಿಎಸ್​ ನಾಯಕರೊಂದಿಗೆ ಚರ್ಚಿಸಿ ಪಕ್ಷ ಸಂಘಟನೆ ದೃಷ್ಠಿಯಿಂದ  ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗ್ತಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

ಚೆನ್ನೈ ವಿರುದ್ಧ ಹಸಿರು ಜೆರ್ಸಿಯಲ್ಲಿ ಆರ್​ ಸಿ ಬಿ ಕಣಕ್ಕೆ..! ಕಾರಣ ಏನ್ ಗೊತ್ತಾ?

  ದುಬೈ :  13 ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಳೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣೆಸಲಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ...

Recent Comments