ಬೆಂಗಳೂರು: ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಪತ್ರಕರ್ತರೊಬ್ಬರು ದೂರು ದಾಖಲಿಸಿದ್ದಾರೆ. ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಿಸಿರುವ ಪತ್ರಕರ್ತ, “ಆಪರೇಷನ್ ಕಮಲ ಆಡಿಯೋ ಸಂಪೂರ್ಣ ನಕಲಿ. ಆಡಿಯೋದಲ್ಲಿ ಅನಗತ್ಯವಾಗಿ ನನ್ನ ಹೆಸರು ಪ್ರಸ್ತಾಪ ಮಾಡಲಾಗಿದೆ. ಆಡಿಯೋವನ್ನು ಸಂಪೂರ್ಣವಾಗಿ ತಿರುಚಲಾಗಿದೆ. ಆಡಿಯೋ ಸತ್ಯಾಸತ್ಯತೆ ಪರಿಶೀಲಿಸಬೇಕು” ಅಂತ ದೂರಿನಲ್ಲಿ ತಿಳಿಸಿದ್ದಾರೆ.