Sunday, May 29, 2022
Powertv Logo
Homeವಿದೇಶದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಕೆ.ಎಲ್​ ರಾಹುಲ್​​ ನಾಯಕ..?

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಕೆ.ಎಲ್​ ರಾಹುಲ್​​ ನಾಯಕ..?

ನ್ಯೂಜಿಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಕ್ಲೀನ್ ಸ್ವೀಪ್​​ ಮಾಡಿ ಬೀಗಿದ್ದ ಭಾರತ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವೈಟ್​​ವಾಶ್ ಮುಖಭಂಗ ಅನುಭವಿಸಿದೆ. ಇದೀಗ ಈ ಸೋಲಿನ ಆಘಾತದಿಂದ ಹೊರಬರಲು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಗೆಲುವಿನ ಟ್ರ್ಯಾಕ್​ಗೆ ಮರಳುವ ತವಕದಲ್ಲಿದೆ. ಅಭಿಮಾನಿಗಳು ಕೂಡ ಭಾರತ ಪುಟಿದೇಳುವುದನ್ನು ಎದುರು ನೋಡ್ತಿದ್ದಾರೆ.
ಮಾರ್ಚ್​ 12ರಿಂದ ಭಾರತದಲ್ಲೇ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಟೂರ್ನಿಗೆ ಬಿಸಿಸಿಐ ಇನ್ನಷ್ಟೇ ತಂಡವನ್ನು ಪ್ರಕಟಿಸಬೇಕಾಗಿದೆ. ಈ ನಡುವೆ ಸತತ ಟೂರ್ನಿಗಳಿಂದ ದಣಿದಿರುವ ಕೊಹ್ಲಿ ವಿಶ್ರಾಂತಿ ಬಯಸಿದ್ದಾರೆ ಎಂದು ಹೇಳಲಾಗುತ್ತಿದೆ. ನ್ಯೂಜಿಲೆಂಡ್ ವಿರುದ್ಧದ ಕೊನೆಯ ಟಿ20 ಪಂದ್ಯದ ವೇಳೆ ಗಾಯಗೊಂಡಿದ್ದ ರೋಹಿತ್ ಶರ್ಮಾ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ತಂಡವನ್ನು ಯಾರು ಮುನ್ನೆಡೆಸುತ್ತಾರೆ ಎಂಬ ಚರ್ಚೆ ಶುರುವಾಗಿದೆ.
ಗಾಯಗೊಂಡು ತಂಡದಿಂದ ದೂರವಿದ್ದ ಇನ್ನೊಬ್ಬ ಆರಂಭಿಕ ಆಟಗಾರ ಶಿಖರ್ ಧವನ್ ತಂಡಕ್ಕೆ ಮರಳುವ ನಿರೀಕ್ಷೆಯಿದ್ದು, ಅವರೇ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಿದಹಾಸ್ ಟ್ರೋಫಿ ಮತ್ತು 2018ರ ಏಷ್ಯಾಕಪ್​ನಲ್ಲಿ ಧವನ್ ಉಪನಾಯಕನಾಗಿ ಜವಬ್ದಾರಿ ನಿಭಾಯಿಸಿದ್ದರು. ಇಂಡಿಯಾ ಎ ಮತ್ತು ಐಪಿಎಲ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ತಂಡವನ್ನು ಮುನ್ನೆಡೆಸಿದ್ದಾರೆ.
ಧವನ್​ಗಿಂತ ಪ್ರಬಲವಾಗಿ ಕೇಳಿಬರುತ್ತಿರುವ ಹೆಸರು ಕನ್ನಡಿಗ ಕೆ.ಎಲ್ ರಾಹುಲ್ ಅವರದ್ದು , ನ್ಯೂಜಿಲೆಂಡ್ ವಿರುದ್ಧದ 5ನೇ ಟಿ20 ಮ್ಯಾಚಲ್ಲಿ ಫೀಲ್ಡಿಂಗ್ ವೇಳೆ ತಂಡವನ್ನು ಯಶಸ್ವಿಯಾಗಿ ಮುನ್ನೆಡೆಸಿದ್ರು. ಐಪಿಎಲ್​ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕತ್ವ ವಹಿಸಿಕೊಳ್ಳುತ್ತಿರುವ ಇವರು ಟೀಮ್ ಇಂಡಿಯಾದ ಭವಿಷ್ಯದ ನಾಯಕನೆಂದೇ ಕರೆಯಲ್ಪಟ್ಟಿದ್ದಾರೆ. ಹೀಗಾಗಿ ಕೊಹ್ಲಿ, ರೋಹಿತ್ ಅನುಪಸ್ಥಿತಿಯಲ್ಲಿ ದ. ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾವನ್ನು ಮುನ್ನಡೆಸುವುದು ಖಚಿತ ಎಂದೇ ಹೇಳಲಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments