Home ಪವರ್ ಪಾಲಿಟಿಕ್ಸ್ ಆ 20 ಶಾಸಕರು ನಿರ್ಧರಿಸ್ತಾರಾ 'ದೋಸ್ತಿ' ಭವಿಷ್ಯ?

ಆ 20 ಶಾಸಕರು ನಿರ್ಧರಿಸ್ತಾರಾ ‘ದೋಸ್ತಿ’ ಭವಿಷ್ಯ?

ಕಲಬುರಗಿ : ‘ಮೈತ್ರಿ ಸರ್ಕಾರ ಬಿದ್ದೋಗುತ್ತೆ ಅಂತ ದಯವಿಟ್ಟು ಹೇಳಬೇಡಿ. ನಂಗೆ ಸಿಎಂ ಆಗೋ ಕನಸಿಲ್ಲ ಅಂತ ಎರಡು ದಿನಗಳ ಹಿಂದಷ್ಟೇ ಹೇಳಿದ್ದರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​ ಯಡಿಯೂರಪ್ಪ. ಆದರೆ, ಇಂದು ಅವರೇ ತಮ್ಮ ಹೇಳಿಕೆಗೆ ಉಲ್ಟಾ ಹೊಡೆದು ಬಿಟ್ಟಿದ್ದಾರೆ..!
ಇಂದು ಕಲಬುರಗಿಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ‘ದೋಸ್ತಿ ಸರ್ಕಾರದ ಭವಿಷ್ಯವನ್ನು 20 ಶಾಸಕರು ನಿರ್ಧರಿಸ್ತಾರೆ. ಮೇ.23 ರ ಲೋಕಸಭಾ ಚುನಾವಣೆಯ ಫಲಿತಾಂಶದ ನಂತ್ರ ರಾಜ್ಯದಲ್ಲಿ ಏನ್ ಬೇಕಾದ್ರೂ ಆಗ್ಬಹುದು. ಕಾಂಗ್ರೆಸ್​ನ ಪಕ್ಷದಲ್ಲಿ 20 ಶಾಸಕರು ಅಸಮಧಾನ ಹೊಂದಿದ್ದಾರೆ ಅಂತ ಹೇಳಿದ್ದಾರೆ.
ಸರ್ಕಾರ ಬೀಳಲಿ ಅಂತ ನಾನು ಹಗಲುಗನಸು ಕಾಣ್ತಿಲ್ಲ. ಅವರವರೇ ಹೊಡೆದಾಡಿಕೊಂಡು ಸರ್ಕಾರ ಬೀಳಿಸ್ತಾರೆ ಅಂತ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಆ 20 ಶಾಸಕರು ನಿರ್ಧರಿಸ್ತಾರಾ ‘ದೋಸ್ತಿ’ ಭವಿಷ್ಯ? ಯಡಿಯೂರಪ್ಪ ಅವರು ನುಡಿದಿರುವ ಭವಿಷ್ಯ ಸತ್ಯವಾಗುತ್ತಾ ಅನ್ನೋದು ಕುತೂಹಲ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments