Home ರಾಜ್ಯ ಕಾಫಿ ನಾಡಿಗೂ ಕಾಲಿಡ್ತಾ ಹಕ್ಕಿಜ್ವರದ ಭೀತಿ..?

ಕಾಫಿ ನಾಡಿಗೂ ಕಾಲಿಡ್ತಾ ಹಕ್ಕಿಜ್ವರದ ಭೀತಿ..?

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಜಯನಗರ ಬಡಾವಣೆಯಲ್ಲಿ ನಾಲ್ಕು ಪಕ್ಷಿಗಳು ಒಂದೇ ಜಾಗದಲ್ಲಿ ಸತ್ತು ಬಿದ್ದಿದ್ದು, ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ನಗರದ ಜಯನಗರ ಬಡಾವಣೆಯ ಏಳನೇ ತಿರುವಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಮಾಳಿಗೆ ಬಳಿ ಒಂದೇ ಜಾಗದಲ್ಲಿ ನಾಲ್ಕು ಪಕ್ಷಿಗಳು ಸತ್ತು ಬಿದ್ದಿವೆ. ಇದನ್ನ ಕಂಡ ಅಕ್ಕಪಕ್ಕದ ನಿವಾಸಿಗಳು ಭಯಗೊಂಡಿದ್ದಾರೆ. ಹಕ್ಕಿ ಜ್ವರದ ಆತಂಕದಲ್ಲಿ ಸ್ಥಳಿಯರು ಹತ್ತಿರ ಹೋಗಲು ಹಿಂದೇಟು ಹಾಕಿದ್ದಾರೆ.

ಈಗಾಗಲೇ ದೇಶದ ನಾಲ್ಕೈದು ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಆವರಿಸಿದೆ. ಕೇರಳದಲ್ಲೂ ಹಕ್ಕಿ ಜ್ವರದ ಭೀತಿ ಇದ್ದು, ಮೈಸೂರು-ಕೇರಳ ಗಡಿಯಲ್ಲೂ ತೀವ್ರ ನಿಗಾವಹಿಸಲಾಗಿದೆ. ಈಗಿರುವಾಗ ರಾಜ್ಯದ ಹಲವಡೆ ಅಲ್ಲಲ್ಲೇ ಹಕ್ಕಿ-ಪಕ್ಷಿ, ಕೋಳಿಗಳು ಸಾವನ್ನಪ್ಪಿದ್ದು ರಾಜ್ಯಕ್ಕೂ ಹಕ್ಕಿಜ್ವರದ ಭೀತಿ ಆವರಿಸಿದ್ಯಾ ಎಂಬ ಅನುಮಾನ ವ್ಯಕ್ತವಾಗಿದೆ. ಈ ಮಧ್ಯೆ ಚಿಕ್ಕಮಗಳೂರು ನಗರದಲ್ಲೂ ಕೂಡ ಹೀಗೆ ಮೂರ್ನಾಲ್ಕು ಪಕ್ಷಿಗಳು ಸಾವನ್ನಪ್ಪಿರೋದು ಕಾಫಿನಾಡಿಗರಿಗೂ ಹಕ್ಕಿ ಜ್ವರದ ಭೀತಿ ಆವರಿಸಿದೆ. ಈ ಹಕ್ಕಿಗಳು ಯಾವ ಕಾರಣಕ್ಕೆ ಸಾವನ್ನಪ್ಪಿವೆ ಎಂಬುದನ್ನ ಪಶುವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಸತ್ತ ಪಕ್ಷಿಗಳ ಮರಣೋತ್ತರ ಪರೀಕ್ಷೆ ನಡೆಸಿ ಹಕ್ಕಿಗಳ ಸಾವಿಗೆ ನೈಜ ಕಾರಣ ತಿಳಿಸಿ ಜನರ ಆತಂಕವನ್ನ ದೂರ ಮಾಡಬೇಕಿದೆ.

– ಸಚಿನ್ ಶೆಟ್ಟಿ ಚಿಕ್ಕಮಗಳೂರು

LEAVE A REPLY

Please enter your comment!
Please enter your name here

- Advertisment -

Most Popular

‘ಘಟನೆಯ ಹೊಣೆ ಹೊತ್ತು ಈಶ್ವರಪ್ಪ ರಾಜೀನಾಮೆ ನೀಡಲಿ ಪ್ರಸನ್ನ್ ಕುಮಾರ್ ಆಗ್ರಹ’

ಶಿವಮೊಗ್ಗ: ಶಿವಮೊಗ್ಗದಲ್ಲಿ ಕಲ್ಲು ಗಣಿಗಾರಿಕೆ ಸ್ಫೋಟಕದ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಶಿವಮೊಗ್ಗದ ಮಾಜಿ ಶಾಸಕ ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ. ಒಂದು ಲೋಡ್ ಸ್ಪೋಟಕ ವಸ್ತುಗಳು ನಗರಕ್ಕೆ ಬಂದಿದ್ದು ಹೇಗೆ. ನಗರಕ್ಕೆ ಬರುವ...

ಉಸಿರು ಕಟ್ಟಿಸುವ ವಾತಾವರಣವೇ ಪಕ್ಷ ಬಿಡಲು ಕಾರಣ: ರಾಜಣ್ಣ ಕೊರವಿ

ಹುಬ್ಬಳ್ಳಿ: ಜೆಡಿಎಸ್ ಪಕ್ಷದಲ್ಲಿನ ಉಸಿರು ‌ಕಟ್ಟಿಸಿವ ವಾತಾವರಣದಿಂದ ಬೆಸತ್ತು ನಾನು ಹಾಗೂ ನನ್ನ ಬೆಂಬಲಿಗರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದೇವೆ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ‌ ರಾಜಣ್ಣ ಕೊರವಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...

‘ಉದ್ದವ್ ಠಾಕ್ರೆ ವಿರುದ್ಧ ಸಿಡಿದೆದ್ದ ಕರವೇ‌ ಕಾರ್ಯಕರ್ತರು’

ಹುಬ್ಬಳ್ಳಿ: ಶಿವಸೇನೆ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಸಿಎಂ ಉದ್ದವ ಠಾಕ್ರೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಪರ ಸಂಘಟನೆಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಶಿವಸೇನಾ ವಿರುದ್ದ ಸಿಡಿದೆದ್ದ ಕರವೇ ಯುವಸೇನಾ ಕಾರ್ಯಕರ್ತರು ಕರವೇ...

‘ಮೃತ ಕುಟುಂಬಗಳಿಗೆ ರಾಷ್ಟ್ರಪತಿ ಸಾಂತ್ವನ’

ಶಿವಮೊಗ್ಗ: ಕಲ್ಲು ಕ್ವಾರಿ ದುರಂತಕ್ಕೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಧಿಗ್ಬ್ರಮೆಗೊಂಡಿದ್ದಾರೆ. ಸ್ಪೋಟದಿಂದ ಜೀವ ಹಾನಿಯಾಗಿರೋದು ನೋವಿನ ಸಂಗತಿ. ಇಂತಹದೊಂದು ದುರಾದೃಷ್ಟಕರ ಘಟನೆ ನೆಡೆಯಬಾರದಿತ್ತು. ಮೃತರ ಕುಟುಂಬಗಳಿಗೆ ರಾಷ್ಟ್ರಪತಿ ಸಾಂತ್ವನ. ಘಟನೆಯಲ್ಲಿ ಗಾಯಗೊಂಡವರು ಶೀಘ್ರವೇ...

Recent Comments