Home ರಾಜ್ಯ ಸಾಮಾಜಿಕ ಜಾಲತಾಣದಲ್ಲಿ ಕನ್ನಡ ವಿಶ್ವ ವಿದ್ಯಾಲಯ ಉಳಿಸಿ ಅಭಿಯಾನ..!

ಸಾಮಾಜಿಕ ಜಾಲತಾಣದಲ್ಲಿ ಕನ್ನಡ ವಿಶ್ವ ವಿದ್ಯಾಲಯ ಉಳಿಸಿ ಅಭಿಯಾನ..!

ಬಳ್ಳಾರಿ: ಹಂಪಿ ಕನ್ನಡ ವಿವಿಗೆ ಅನುದಾನ ತಡೆಹಿಡಿದಿರುವ ಸರ್ಕಾರದ ನೀತಿಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಕನ್ನಡ ಭಾಷೆ ಅಧ್ಯಯನ ಮತ್ತು ಉಳಿವಿಗಾಗಿ ಕೆಲಸ ಮಾಡುತ್ತಿರುವ ಕನ್ನಡ ವಿವಿಗೆ ಸರ್ಕಾರದ ಅನುದಾನ ತಡೆಹಿಡಿದಿದ್ದನ್ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ನಾಡಿನ ಹಿರಿಯ ಸಾಹಿತಿಗಳು ಸಹ ಖಂಡನೆ ಮಾಡಿದ್ದಾರೆ.

ವಿವಿಯ ತಿಂಗಳ ನಿರ್ವಹಣಾ ಖರ್ಚು 35 ಲಕ್ಷದವರೆಗೆ ಆಗುತ್ತೆ. ಅಂಥದ್ದರಲ್ಲಿ ಈಗ ಮೀಸಲಿರಿಸಿರುವ ವಾರ್ಷಿಕ 25 ಲಕ್ಷ ಯಾರಿಗೆ ಸಾಲುತ್ತೆ. ಪ್ರತಿ ವರ್ಷವೂ ಏಳೇಂಟು ಕೋಟಿ ಹಣ ಬಿಡುಗಡೆ ಆಗುತ್ತಿತ್ತು. ಆದರೆ ಈಗ ಕೇವಲ 50 ಲಕ್ಷ ಮೀಸಲಿಟ್ಟು ಅದರಲ್ಲಿ ಬರಿ 25 ಲಕ್ಷ ಬಿಡುಗಡೆ ಮಾಡಿದಾರೆ. ಹೀಗಾದರೆ ಸಂಶೋಧನಾ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಗತಿಯೇನು, ಸಿಬ್ಬಂದಿಗಳು, ಗುತ್ತಿಗೆ ಕಾರ್ಮಿಕರಿಗೆ ವೇತ‌ನ ನೀಡುವುದಾದರೂ ಹೇಗೆ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಈ ನಡುವೆ ಸರ್ಕಾರದ ನಡೆಯನ್ನು ವಿರೋಧಿಸಿ ಸಾಹಿತಿಗಳು,ವಿದ್ಯಾರ್ಥಿಗಳು, ಚಿಂತಕರು ಸೇರಿದಂತೆ ನಾಡಿನೆಲ್ಲೆಡೆ ವ್ಯಾಪಕ ಪ್ರತಿರೋಧ ವ್ಯಕ್ತವಾಗ್ತಿದೆ. ಮರಾಠ ನಿಗಮಕ್ಕೆ ಹಣ ಕೊಡುವ ಸರ್ಕಾರಕ್ಕೆ ಕನ್ನಡ ವಿವಿಗೆ ಅನುದಾನ ಕೊಡುವುದಕ್ಕೆ ಹಣ ಇಲ್ವೇ ಅಂತ ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಚಿಂತಕರು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ವಿವಿ ಉಳಿಸಿ ಅಭಿಯಾನದ ಮೂಲಕ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಕನ್ನಡ ವಿವಿ ಕತ್ತು ಹಿಸುಕುವ ಕೆಲಸ ಸದ್ದಿಲ್ಲದೇ ಸಾಗಿದೆ. ಇದಕ್ಕೆ ಕನ್ನಡಿಗರು ಯಾರೂ ಆಸ್ಪದ ಕೊಡುವುದಿಲ್ಲ ಅಂತ ಕಿಡಿಕಾರಿದ್ದಾರೆ. ಅಲ್ಲದೇ, ಕೂಡಲೇ ಸರ್ಕಾರ  ವಿವಿಗೆ ಅನುದಾನ ಬಿಡುಗಡೆ ಮಾಡಬೇಕು ಅಂತ ಒತ್ತಾಯಿಸಿದ್ದಾರೆ.

-ಅರುಣ್ ನವಲಿ ಪವರ್ ಟಿವಿ ಬಳ್ಳಾರಿ

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments