ಹುತಾತ್ಮ ಯೋಧ ಗುರು ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ

0
299

ಬೆಂಗಳೂರು: ಹುತಾತ್ಮ ಯೋಧ ಗುರು ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರು 25 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ ಯೋಧನ ಪತ್ನಿ ಕಲಾವತಿ ಅವರಿಗೆ ಸರ್ಕಾರಿ ನೌಕರಿ ನೀಡುವುದಾಗಿಯೂ ತಿಳಿಸಿದ್ದಾರೆ. 

ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಸಿಆರ್​ಪಿಎಫ್ ಯೋಧರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯದ ಯೋಧ ಹೆಚ್​​. ಗುರು ಹುತಾತ್ಮರಾಗಿದ್ದಾರೆ. ಗುರು ಅವರ ಪಾರ್ಥಿವ ಶರೀರವನ್ನು ಹುಟ್ಟೂರು ಗುಡಿಗೆರೆಗೆ ಕೊಂಡೊಯ್ಯಲಾಗುತ್ತಿದ್ದು, ಅಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ.

LEAVE A REPLY

Please enter your comment!
Please enter your name here