ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಮಾರ್ಚ್ 31ರವರೆಗೆ ಬಂದ್ ಮುಂದುವರೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮಾರ್ಚ್ 14ರಿಂದ ಶಾಲಾ ಒಂದು ವಾರಗಳ ಕಾಲ ಪಬ್, ಥಿಯೇಟರ್, ಬೇಸಿಗೆ ಶಿಬಿರಗಳು, ಮಾಲ್ಸ್ ಸೇರಿದಂತೆ ಯಾವುದೇ ರೀತಿಯ ಕಾರ್ಯಕರ್ಮಗಳನ್ನು ನಡೆಸದಂತೆ ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶಿಸಿದ್ದರು. ಆದರೆ ಇದೀಗ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಆದೇಶವನ್ನು ಮಾರ್ಚ್ 31ರವರೆಗೆ ವಿಸ್ತರಿಸುವಂತೆ ಯಡಿಯೂರಪ್ಪ ಆದೇಶಿಸಿದ್ದಾರೆ.
ಇನ್ನು ಸೋಂಕು ತಡೆಗೆ ಡಾ.ಅಶ್ವತ್ಥ್ ನಾರಾಯಣ, ಶ್ರೀರಾಮುಲು, ಬಸವರಾಜ್ ಬೊಮ್ಮಾಯಿ ಹಾಗೂ ಕೆ.ಸುಧಾಕರ್ ನೇತೃತ್ವದ ನಾಲ್ಕು ಟಾಸ್ಕ್ ಫೋರ್ಸ್ಗಳನ್ನು ರಚಿಸಲಾಗಿದೆ.