ನೂತನ ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ

0
105

ಬೆಂಗಳೂರು: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಸ್ಪೀಕರ್ ಆಗಿದ್ದ ಕಾಂಗ್ರೆಸ್ನ ಕೆ.ಆರ್. ರಮೇಶ್ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸ್ಪೀಕರ್ ಸ್ಥಾನ ಖಾಲಿಯಾಗಿತ್ತು. ಇದೀಗ ಅವರ ಸ್ಥಾನಕ್ಕೆ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಯಸ್ ಪಕ್ಷದಿಂದ ಯಾರೂ ನಾಮಪತ್ರ ಸಲ್ಲಿಸಲಿಲ್ಲ. ಹೀಗಾಗಿ ಕಾಗೇರಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here