Home ರಾಜ್ಯ ಶಾಸಕರನ್ನು ಹುಡುಕಿಕೊಡಿ....

ಶಾಸಕರನ್ನು ಹುಡುಕಿಕೊಡಿ….

ಬೆಂಗಳೂರು : ಒಂದು ಕಡೆ ಸರ್ಕಾರ ಉಳಿಸಿಕೊಳ್ಳಲು ದೋಸ್ತಿ ನಾಯಕರು ಕಸರತ್ತನ್ನು ನಡೆಸ್ತಾ ಇದ್ರೆ, ಮತ್ತೊಂಡು ಕಡೆ ಸರ್ಕಾರ ರಚನೆಗೆ ಪ್ಲಾನ್ ರೂಪಿಸಿಕೊಳ್ಳುತ್ತಿದೆ ಬಿಜೆಪಿ. ಇವರುಗಳ ಅಧಿಕಾರದ ಹಪಹಪಿಯಲ್ಲಿ ಮತದಾರರು ಮಾತ್ರ ಪರದಾಡುವಂತಾಗಿದೆ. ಇದೀಗ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್, ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಹಾಗೇ ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜು ಅವರನ್ನು ಹುಡುಕಿಕೊಡಿ ಅಂತಾ ಮತದಾರರು ಸ್ಪೀಕರ್ ಗೆ ದೂರು ಕೊಟ್ಟಿದ್ದಾರೆ.

ನಮ್ಮ ಶಾಸಕರು ಕಾಣೆಯಾಗಿದ್ದು, ಕ್ಷೇತ್ರದಲ್ಲಿ ಸಾಕಷ್ಟು ತೊಂದರೆಗಳಿವೆ ಅಂತಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ಕಾಣೆಯಾಗಿದ್ದಾರೆ ಅಂತಾ ಕಾಂಗ್ರೆಸ್ ಕಾರ್ಯಕರ್ತರು ಅಥಣಿ ಪೊಲೀಸ್ ಠಾಣೆಯಲ್ಲಿ ದೂರನ್ನು ಕೊಟ್ಟಿದ್ದಾರೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗ್ಬೇಕು ಹಾಗಾಗಿ ಶಾಸಕರನ್ನು ಹುಡುಕಿಕೊಡಿ ಎಂದು ಮನವಿ ಮಾಡ್ಕೊಂಡಿದ್ದಾರೆ. ಇತ್ತ ಚಿಕ್ಕಬಳ್ಳಾಪುರದಲ್ಲೂ ಅದೇ ಕಥೆ.

ರಾಜೀನಾಮೆ ನೀಡಿದ ಬಳಿಕ ಶಾಸಕ ಸುಧಾಕರ್ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಶಾಸಕರನ್ನು ಬಲವಂತವಾಗಿ ಕರೆದುಕೊಂಡು ಹೋಗಿದ್ದಾರೆಂದು ಕಾಂಗ್ರೆಸ್​ ಆರೋಪ ಮಾಡಿದೆ. ಅಲ್ಲದೇ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್ .ಕೇಶವರೆಡ್ಡಿ ಬಿಕ್ಕಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments