Home ರಾಜ್ಯ ನಾಳೆಯಿಂದ ಪಿಯು ಪರೀಕ್ಷೆ ಆರಂಭ

ನಾಳೆಯಿಂದ ಪಿಯು ಪರೀಕ್ಷೆ ಆರಂಭ

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ಪಿಯು ಪರೀಕ್ಷೆ ಆರಂಭವಾಗಲಿದೆ. ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ‌ ಸಿದ್ಧತೆಗಳನ್ನು ಮಾಡಿಕೊಂಡಿದೆ. 2019 – 20 ನೇ ಸಾಲಿನ ಪಿಯು ಪರೀಕ್ಷೆ ಮಾರ್ಚ್ 1 ರಿಂದ ಮಾರ್ಚ್​ 18 ವರೆಗೂ ನಡೆಯಲಿದೆ. ರಾಜ್ಯಾದ್ಯಂತ ಒಟ್ಟು 6,73,606  ವಿದ್ಯಾರ್ಥಿಗಳು ಪಿಯು ಪರೀಕ್ಷೆ ಬರೆಯಲಿದ್ದಾರೆ. ಅದರಲ್ಲಿ 3,34,738 ವಿಧ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಲಿದ್ದಾರೆ. ಒಟ್ಟು 1,013 ಪರೀಕ್ಷಾ ಕೇಂದ್ರಗಳಿದ್ದು, 2 ಸಾವಿರಕ್ಕೂ ಅಧಿಕ ಸ್ಕ್ವಾಡ್  ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಪರೀಕ್ಷ‌ ವೇಳ ಪಟ್ಟಿ: ಮಾರ್ಚ್ 1 ಅರ್ಥಶಾಸ್ತ್ರ, ಮಾರ್ಚ್ 7 ಗಣಿತಶಾಸ್ತ್ರ, ಮಾರ್ಚ್ 9 ರಾಜ್ಯಶಾಸ್ತ್ರ, ಮಾರ್ಚ್ 11 ವ್ಯವಹಾರ ಅಧ್ಯಯನ, ಸಮಾಜಶಾಸ್ತ್ರ ಮತ್ತು ರಸಾಯನಶಾಸ್ತ್ರ, ಮಾರ್ಚ್ 12 ಭೌತಶಾಸ್ತ್ರ, ಮಾರ್ಚ್ 13 ಮನಃಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಮಾರ್ಚ್ 14 ಇತಿಹಾಸ ಮತ್ತು ಜೀವಶಾಸ್ತ್ರ, ಮಾರ್ಚ್ 15 ಹಿಂದಿ, ಮಾರ್ಚ್ 16 ಕನ್ನಡ, ಮಾರ್ಚ್ 18 ಇಂಗ್ಲೀಷ್ ಪರೀಕ್ಷೆಗಳು ನಡೆಯಲಿವೆ.

ಇದೇ ಮೊದಲ ಬಾರಿಗೆ ಆನ್ಲೈನ್ ಮೂಲಕ ಪ್ರವೇಶ ಪತ್ರಿಕೆ ಪಡೆಯುವುದಕ್ಕೆ ಪಿಯು ಬೋರ್ಡ್ ಅನುಮತಿ ನೀಡಿದೆ. ಡಿಜಿಟಲ್ ‌ವಾಚ್ ಗಳ ಬದಲು ಅನಾಲಾಗ್ ವಾಚ್​ಗಳನ್ನು ಬಳಸುವಂತೆ ಸೂಚನೆ ನೀಡಿದೆ. ಒಟ್ಟು 54  ಮೌಲ್ಯ ಮಾಪನ ಕೇಂದ್ರಗಳ ವ್ಯವಸ್ಥೆಯಾಗಿದ್ದು, ಪರೀಕ್ಷೆ ‌ನಡೆಯುವ ಕೊಠಡಿಗಳಲ್ಲಿ ಸಿಸಿ ಟಿವಿ ಕಣ್ಗಾವಲು ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಗಳ ಓಡಾಟ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನ ಜೆರಾಕ್ಸ್ ಶಾಪ್​ಗಳಿಗೂ ಬೀಗ ಜಡಿಯಲಾಗಿದೆ. ಪ್ರತಿ ಬಾರಿ ಒಂದಲ್ಲ ಒಂದು ಎಡವಟ್ಟು‌ ಮಾಡಿ ಗೊಂದಲ ಸೃಷ್ಟಿ ಮಾಡಿಕೊಳ್ಳುವ ಪಿಯು ಬೋರ್ಡ್ ಈ ಬಾರಿ ಎಲ್ಲ ಪೂರ್ವ ತಯಾರಿಗಳನ್ನು ಮಾಡಿಕೊಂಡಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments