Friday, September 30, 2022
Powertv Logo
Homeರಾಜ್ಯಕೊರೋನಾ ಸೋಂಕಿತರ ಸಂಖ್ಯೆಯಲ್ಲಿ 3ನೇ ಸ್ಥಾನಕ್ಕೇರಿದ ಕರ್ನಾಟಕ!

ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ 3ನೇ ಸ್ಥಾನಕ್ಕೇರಿದ ಕರ್ನಾಟಕ!

ಬೆಂಗಳೂರು : ರಾಜ್ಯದಲ್ಲಿ ಇಂದು ಒಂದೇ ದಿನ 7 ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆಯಲ್ಲಿ ರಾಜ್ಯ ಮೂರನೇ ಸ್ಥಾನಕ್ಕೇರಿದೆ. ಮಹಾರಾಷ್ಟ್ರ (71) ಮೊದಲ ಹಾಗೂ ಕೇರಳ (60) 2ನೇ ಸ್ಥಾನದಲ್ಲಿದೆ.
ರಾಜ್ಯದಲ್ಲಿ ಮಾರ್ಚ್​​ 21ರಂದು 5, ಮಾರ್ಚ್​ 22ರಂದು 6 ಹಾಗೂ ಇಂದು (ಮಾರ್ಚ್ 23) 7 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಕೊರೋನಾ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ , ದಕ್ಷಿಣ ಕನ್ನಡ, ಚಿಕ್ಕಾಬಳ್ಳಾಪುರ, ಮೈಸೂರು, ಕಲಬುರಗಿ, ಬೆಳಗಾವಿ, ಕೊಡಗು, ಧಾರವಾಡ ಜಿಲ್ಲೆಗಳು ಮಾರ್ಚ್​ 31ರವರೆಗೆ ಲಾಕ್​ಡೌನ್ ಮಾಡಲಾಗಿದೆ.

- Advertisment -

Most Popular

Recent Comments