Home ಸಿನಿ ಪವರ್ ವರಮಹಾಲಕ್ಷ್ಮಿ ಹಬ್ಬಕ್ಕೆ ಕುರುಕ್ಷೇತ್ರ, ಪೈಲ್ವಾನ್ ಅಲ್ಲ ಕೆಂಪೇಗೌಡ ..!

ವರಮಹಾಲಕ್ಷ್ಮಿ ಹಬ್ಬಕ್ಕೆ ಕುರುಕ್ಷೇತ್ರ, ಪೈಲ್ವಾನ್ ಅಲ್ಲ ಕೆಂಪೇಗೌಡ ..!

ಸ್ಯಾಂಡಲ್​ವುಡ್​ನಲ್ಲಿ ಬಹು ನಿರೀಕ್ಷಿತ ಸಿನಿಮಾಗಳು ಸಾಲು ಸಾಲಾಗಿ ರಿಲೀಸ್ ಆಗುತ್ತಿವೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯ ‘ಕುರುಕ್ಷೇತ್ರ’, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್​’ ರಿಲೀಸ್​ಗೆ ರೆಡಿಯಾಗಿವೆ. ಈ ಎರಡೂ ಸಿನಿಮಾಗಳು ವರಮಹಾಲಕ್ಷ್ಮಿ ಹಬ್ಬಕ್ಕೆ ಒಟ್ಟಿಗೇ ತೆರೆಗೆ ಬರುತ್ತವೆ ಎಂದು ಹೇಳಲಾಗಿತ್ತು. ಆದರೆ, ಕುರುಕ್ಷೇತ್ರ ಒಂದು ವಾರ ಮುಂಚಿತವಾಗಿ ಅಂದ್ರೆ ಆಗಸ್ಟ್ 2ಕ್ಕೆ ರಿಲೀಸ್ ಆಗುತ್ತಿದೆ. ಪೈಲ್ವಾನ್ ಅಖಾಡಕ್ಕೆ ಇಳಿಯೋದು ಆಗಸ್ಟ್ 29ಕ್ಕೆ..!
ಆದರೆ, ಇದೀಗ ವರಮಹಾಲಕ್ಷ್ಮಿ ಹಬ್ಬಕ್ಕೆ ಮತ್ತೊಂದು ಬಹು ನಿರೀಕ್ಷಿತ ಸಿನಿಮಾ ರಿಲೀಸ್ ಆಗಲಿದೆ. ಕೋಮಲ್ ಅಭಿನಯದ ಕೆಂಪೇಗೌಡ-2 ಸಿನಿಮಾ ಆಗಸ್ಟ್ 9ಕ್ಕೆ ರಿಲೀಸ್ ಆಗುತ್ತಿದೆ. ಕೋಮಲ್ ಈ ಸಿನಿಮಾದ ಮೂಲಕ ಕೋಮಲ್ 3 ವರ್ಷ ಬಳಿಕ ಬೆಳ್ಳಿ ಪರದೆಗೆ ಎಂಟ್ರಿ ಕೊಡ್ತಿದ್ದಾರೆ. ಸುದೀಪ್ ಅಭಿನಯದ 2012ರಲ್ಲಿ ತೆರೆಕಂಡ ಕೆಂಪೇಗೌಡ ಸಿನಿಮಾದ ನಿರ್ಮಾಪಕ ಶಂಕರ್ ಗೌಡ ನಿರ್ದೇಶನದ ಸಿನಿಮಾ ಈ ಕೆಂಪೇಗೌಡ-2. ಈ ಸಿನಿಮಾದಲ್ಲಿ ಕೋಮಲ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments