ಕೇರಳ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯನ್ನು ತಿರಸ್ಕರಿಸುವಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ನಿರ್ಣಯ ಮಂಡಿಸಿದರು. ಈ ವೇಳೆ ಬಿಜೆಪಿಯ ಶಾಸಕ ರಾಜಗೋಪಾಲ್ ಒಬ್ಬರೇ ನಿರ್ಣಯದ ವಿರುದ್ಧ ಮಾತನಾಡಿದರು. ಉಳಿದವರೆಲ್ಲ ಬೆಂಬಲ ಸೂಚಿಸಿದ್ದರಿಂದ ವಿಧಾನಸಭಾಧ್ಯಕ್ಷರು ನಿರ್ಣಯವನ್ನು ಅವಿರೋಧವಾಗಿ ಅಂಗೀಕರಿಸಿದರು. ಹೀಗಾಗಿ ಬಿಜೆಪಿ ಶಾಸಕ ನಿರ್ಣಯ ಪರ ಮತ ಹಾಕಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಯಿತು.
ವಿಶೇಷ ಅಧಿವೇಶನ ಕರೆಯಲು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಒಪ್ಪಿಗೆ ಕೊಟ್ಟಿದ್ದರು. ವಿಶೇಷ ಅಧಿವೇಶನದಲ್ಲಿ ನಿರ್ಣಯವನ್ನು ಮಂಡಿಸಿದ ಸಿಎಂ ಪಿಣರಾಯಿ ವಿಜಯನ್, ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ರೈತರ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಕೇರಳ ರಾಜ್ಯಕ್ಕೆ ಮಾರಕವಾಗಿದೆ. ಕೇಂದ್ರ ಸರ್ಕಾರ ನೂತನ ಕಾಯ್ದೆಯನ್ನು ಈ ಕೂಡಲೇ ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.