ಹುಬ್ಬಳ್ಳಿ : ಕೊರೊನಾ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಸೇರಿಸಿಕೊಳ್ಳುತ್ತಿಲ್ಲ ಎಂಬ ಆರೋಪ ಅಲ್ಲಲ್ಲಿ ಕೇಳಿ ಬರುತ್ತಿವೆ. ಆದ್ರೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿಯೂ ಕೂಡ ಕೊರೊನಾ ಸೋಂಕಿತರನ್ನು ತಗೆದುಕೊಳ್ಳುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಕೊರೊನಾ ರೋಗಿಗಳನ್ನು ಕಿಮ್ಸ್ ನಲ್ಲಿ ತಗೆದುಕೊಳ್ಳುತ್ತಿಲ್ಲ ಎಂಬ ಆರೋಪ ಮಾಡಿದ್ದಾರೆ. ತಡರಾತ್ರಿ ನಗರದ ಸ್ವಾಮೀ ವಿವೇಕಾನಂದ ಆಸ್ಪತ್ರೆಯಿಂದ ಇಬ್ಬರು ಕೊರೊನಾ ಸೋಂಕಿತರನ್ನು ಕಿಮ್ಸ್ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಸ್ಥಳಾಂತರ ಮಾಡಲಾಗಿದೆ. ಆದ್ರೆ ಗಂಟೆಗಳವರೆಗೂ ಕಿಮ್ಸ್ ಆಸ್ಪತ್ರೆಯ ಹೊರಗಡೆ ಅಂಬ್ಯುಲೆನ್ಸ್ ನಲ್ಲಿ ರೋಗಿಗಳು ಇದ್ದರು ಒಳಗೆ ತೆಗೆದುಕೊಳ್ಳುತ್ತಿಲ್ಲ ಎಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಈ ಮೂಲಕ ಆಸ್ಪತ್ರೆಯ ಸಿಬ್ಬಂದಿ ಹಾಗೂ ರಾಜ್ತ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ