Home ರಾಜ್ಯ ಬೆಳಗಾವಿಗೆ ತಲುಪಿದ 3ನೇ ಹಂತದ ಕೋವ್ಯಾಕ್ಸಿನ್​

ಬೆಳಗಾವಿಗೆ ತಲುಪಿದ 3ನೇ ಹಂತದ ಕೋವ್ಯಾಕ್ಸಿನ್​

ಬೆಂಗಳೂರು: ದೇಶದಾದ್ಯಂತ ಕಿಲ್ಲರ್ ಕೊರೋನಾ ಸೋಂಕಿನ ಹಾವಳಿ ಹೆಚ್ಚಾಗಿದ್ದು, ಜನರು ಭಯದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿ ಕೊರೋನಗೆ ಲಸಿಕೆ ಕಂಡುಹಿಡಿಯುವಲ್ಲಿ ಅನೇಕ ಕಂಪನಿಗಳು ಪ್ರಯತ್ನಿಸುತ್ತಿದ್ದು, ಇದೀಗ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗಕ್ಕೆ ಸಿದ್ಧವಾಗಿದೆ. ಐಸಿಎಂಆರ್ ಮತ್ತು ಭಾರತ ಬಯೋಟೆಕ್ ಸಂಸ್ಥೆ ಸಹಯೋಗದೊಂದಿಗೆ ಸಂಶೋಧನೆ ಮಾಡಿದ್ದ ಕೋವ್ಯಾಕ್ಸಿನ್ ಔಷಧ ಬಳಕೆಗೆ ಕ್ಲಿನಿಕಲ್ ಟ್ರಯಲ್ ಗೆ ಸಿದ್ಧವಾಗಿದೆ. ಈ ಕೋವ್ಯಾಕ್ಸಿನ್ ಲಸಿಕೆಯನ್ನು ಪ್ರಾಯೋಗಿಕವಾಗಿ ಬಳಕೆ ಮಾಡಲು  ದೇಶದಲ್ಲಿ 12 ಸೆಂಟರ್ ಗಳನ್ನು ಭಾರತೀಯ ವೈಧ್ಯಕೀಯ ಪ್ರಾಧಿಕಾರ ಆಯ್ಕೆ ಮಾಡಲಾಗಿದೆ. ಅದರಲ್ಲಿ ಬೆಳಗಾವಿ ಜಿಲ್ಲೆಯೂ ಒಂದಾಗಿದೆ.

ಈಗಾಗಲೇ ಬೆಳಗಾವಿಗೆ ಕೋವ್ಯಾಕ್ಸಿನ್ ತಲುಪಿದ್ದು, ಒಂದನೇ ಹಂತ ಮತ್ತು ಎರಡನೇ ಹಂತದ ಟ್ರಯಲ್ ಯಶಸ್ವಿಯಾಗಿದೆ. ಬೆಳಗಾವಿಯ ಜೀವನ್ ರೇಖಾ ಆಸ್ಪತ್ರೆಯ ನಿರ್ದೇಶಕ ಡಾ.ಅಮಿತ್ ಭಾಟೆ ನೇತೃತ್ಚದಲ್ಲಿ ಲಸಿಕೆ ಟ್ರಯಲ್ ಮಾಡಲಾಗುತ್ತಿದೆ. ಮೂರು ಹಂತದ ಕೋವ್ಯಾಕ್ಸಿನ್ ಲಸಿಕೆ ಬೆಳಗಾವಿಗೆ ಬಂದು ತಲುಪಿದ್ದು, ಲಸಿಕೆಯ ಟ್ರಯಲ್ ಶುರುಮಾಡಲಾಗಿದೆ.  ಬೆಳಗಾವಿಯಲ್ಲಿ ಜುಲೈ 31ರಂದು ನಾಲ್ವರ ಮೇಲೆ ಮೊದಲ ಹಂತದ ಲಸಿಕೆಯನ್ನು ಪ್ರಯೋಗ ಮಾಡಲಾಗಿತ್ತು. ಇನ್ನೂ ಎರಡನೇ ಹಂತದ ಪ್ರಯೋಗದಲ್ಲಿ ಸುಮಾರು 50 ಜನರ ಮೇಲೆ ಪ್ರಯೋಗ ಮಾಡಲಾಗಿತ್ತು.

ಈಗ ಮೋರನೇ ಹಂತದ ಲಸಿಕೆ ಪ್ರಯೋಗದಲ್ಲಿ ದೇಶದ 25ಸಾವಿರ ಜನರ ಮೇಲೆ ಟ್ರಯಲ್ ಮಾಡಲಾಗುತ್ತದೆ. 25 ಸಾವಿರ ಜನರಲ್ಲಿ 25ಟ್ರಯಲ್ ಕೇಂದ್ರ ಆಯ್ಕೆ ಮಾಡಲಾಗಿದೆ. ಅದರಲ್ಲಿ ಬೆಳಗಾವಿಯ ರೇಖಾ ಆಸ್ಪತ್ರೆ ಕೂಡ ಒಂದು. ಮೂರನೇ ಹಂತದಲ್ಲಿ 400 ಜನರ ಮೇಲೆ ಲಸಿಕೆ ಪ್ರಯೋಗ ಮಾಡಲಾಗಿದೆ. ಒಂದು ಸಾವಿರ ಜನರ ಮೇಲೆ ಲಸಿಕೆ ಪ್ರಯೋಗ ಮಾಡಿ ಕೇಂದ್ರ ಸರ್ಕಾರ ಹಾಗೂ ಐಸಿಎಂಆರ್ ಗೆ ರಿಪೋರ್ಟ್ ಕಳಿಸಲಾಗುತ್ತೆ. ಎಲ್ಲವೂ ಅಂದುಕೊಂಡೆಂತೆ ಆದರೆ ಫೆಬ್ರವರಿಯಲ್ಲಿ ಲಸಿಕೆ ಸಿಗಬಹುದು ಎಂದು ರೇಖಾ ಆಸ್ಪತ್ರೆಯ ನಿರ್ದೇಶಕ ಅಮಿತ್ ಭಾಟೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ಘಟನೆಯ ಹೊಣೆ ಹೊತ್ತು ಈಶ್ವರಪ್ಪ ರಾಜೀನಾಮೆ ನೀಡಲಿ ಪ್ರಸನ್ನ್ ಕುಮಾರ್ ಆಗ್ರಹ’

ಶಿವಮೊಗ್ಗ: ಶಿವಮೊಗ್ಗದಲ್ಲಿ ಕಲ್ಲು ಗಣಿಗಾರಿಕೆ ಸ್ಫೋಟಕದ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಶಿವಮೊಗ್ಗದ ಮಾಜಿ ಶಾಸಕ ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ. ಒಂದು ಲೋಡ್ ಸ್ಪೋಟಕ ವಸ್ತುಗಳು ನಗರಕ್ಕೆ ಬಂದಿದ್ದು ಹೇಗೆ. ನಗರಕ್ಕೆ ಬರುವ...

ಉಸಿರು ಕಟ್ಟಿಸುವ ವಾತಾವರಣವೇ ಪಕ್ಷ ಬಿಡಲು ಕಾರಣ: ರಾಜಣ್ಣ ಕೊರವಿ

ಹುಬ್ಬಳ್ಳಿ: ಜೆಡಿಎಸ್ ಪಕ್ಷದಲ್ಲಿನ ಉಸಿರು ‌ಕಟ್ಟಿಸಿವ ವಾತಾವರಣದಿಂದ ಬೆಸತ್ತು ನಾನು ಹಾಗೂ ನನ್ನ ಬೆಂಬಲಿಗರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದೇವೆ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ‌ ರಾಜಣ್ಣ ಕೊರವಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...

‘ಉದ್ದವ್ ಠಾಕ್ರೆ ವಿರುದ್ಧ ಸಿಡಿದೆದ್ದ ಕರವೇ‌ ಕಾರ್ಯಕರ್ತರು’

ಹುಬ್ಬಳ್ಳಿ: ಶಿವಸೇನೆ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಸಿಎಂ ಉದ್ದವ ಠಾಕ್ರೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಪರ ಸಂಘಟನೆಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಶಿವಸೇನಾ ವಿರುದ್ದ ಸಿಡಿದೆದ್ದ ಕರವೇ ಯುವಸೇನಾ ಕಾರ್ಯಕರ್ತರು ಕರವೇ...

‘ಮೃತ ಕುಟುಂಬಗಳಿಗೆ ರಾಷ್ಟ್ರಪತಿ ಸಾಂತ್ವನ’

ಶಿವಮೊಗ್ಗ: ಕಲ್ಲು ಕ್ವಾರಿ ದುರಂತಕ್ಕೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಧಿಗ್ಬ್ರಮೆಗೊಂಡಿದ್ದಾರೆ. ಸ್ಪೋಟದಿಂದ ಜೀವ ಹಾನಿಯಾಗಿರೋದು ನೋವಿನ ಸಂಗತಿ. ಇಂತಹದೊಂದು ದುರಾದೃಷ್ಟಕರ ಘಟನೆ ನೆಡೆಯಬಾರದಿತ್ತು. ಮೃತರ ಕುಟುಂಬಗಳಿಗೆ ರಾಷ್ಟ್ರಪತಿ ಸಾಂತ್ವನ. ಘಟನೆಯಲ್ಲಿ ಗಾಯಗೊಂಡವರು ಶೀಘ್ರವೇ...

Recent Comments