ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ಎರಡು ದಿನಗಳಿಂದ ಜ್ವರ ಮತ್ತು ಬೆನ್ನು ನೋವಿನಿಂದ ಡಿಕೆಶಿ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದು, ಕೊವಿಡ್ ಪಾಸಿಟಿವ್ ಬಂದಿದೆ.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರಿಗೆ ಕೊವಿಡ್ ಇರುವುದು ತಿಳಿಯಿತು. ಕೊರೋನಾ ಸೋಂಕಿನಿಂದ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಅಂತ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.