Home ಕ್ರೀಡೆ P.Cricket ಮನೀಷ್ ಪಾಂಡೆಯನ್ನೇ ಹಿಂದಿಕ್ಕಿದ ಪವನ್ ದೇಶಪಾಂಡೆ..!

ಮನೀಷ್ ಪಾಂಡೆಯನ್ನೇ ಹಿಂದಿಕ್ಕಿದ ಪವನ್ ದೇಶಪಾಂಡೆ..!

ಟೀಮ್ ಇಂಡಿಯಾದ ಆಟಗಾರ ಮನೀಷ್ ಪಾಂಡೆಗಿಂತ ಪವನ್ ದೇಶಪಾಂಡೆಗೆ ಡಿಮ್ಯಾಂಡ್ ಹೆಚ್ಚಿದೆ. ಈ ಇಬ್ಬರು ಕನ್ನಡಿಗರಲ್ಲಿ ಮನೀಷ್ ಪಾಂಡೆ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಭಾರತದ ಪರ ಬ್ಯಾಟ್ ಬೀಸಿ ಗುರುತಿಸಿಕೊಂಡಿದ್ದಾರೆ. ವೆಸ್ಟ್ ಇಂಡೀಸ್​ ಪ್ರವಾಸಕ್ಕೆ ಒಡಿಐ ಹಾಗೂ ಟಿ20ಗೆ ಮನೀಷ್​ ಆಯ್ಕೆಯಾಗಿದ್ದಾರೆ. ಆದರೆ, ಕೆಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಮನೀಷ್ ಪಾಂಡೆಯವರಿಗಿಂತಾ ಧಾರವಾಡದ ಆಲ್​ರೌಂಡರ್​​ ಪವನ್ ದೇಶಪಾಂಡೆಯವರಿಗೆ ಡಿಮ್ಯಾಂಡ್​ ಬಂದಿದೆ..!
ಹೌದು, ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್​) ಹರಾಜಿನಲ್ಲಿ ಪವನ್ ದೇಶಪಾಂಡೆ 7.30 ಲಕ್ಷ ರೂ ಗರಿಷ್ಠ ಮೊತ್ತಕ್ಕೆ ಶಿವಮೊಗ್ಗ ಲಯನ್ಸ್​ ಸೇರಿಕೊಂಡಿದ್ದಾರೆ. ಆರಂಭಿಕ ಸುತ್ತುಗಳಲ್ಲಿ ಮನೀಷ್ ಪಾಂಡೆಯನ್ನು ತಂಡಕ್ಕೆ ಸೇರಿಸಿಕೊಳ್ಳಲು ಯಾವ ಫ್ರಾಂಚೈಸಿಗಳೂ ಮುಂದೆ ಬರಲಿಲ್ಲ. ಕೊನೇ ಕ್ಷಣದಲ್ಲಿ ಮನೀಷ್ 2 ಲಕ್ಷ ರೂಗಳಿಗೆ ಬೆಳಗಾವಿ ಪ್ಯಾಂಥರ್ಸ್​ಗೆ ಸೇಲಾದರು.
ಮನೀಷ್ ಪಾಂಡೆ ವಿಂಡೀಸ್​ ವಿರುದ್ಧದ ಟಿ20, ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಗಸ್ಟ್ 3ರಿಂದ 6ರವರೆಗೆ ಟಿ20 ಸರಣಿ, ಆಗಸ್ಟ್ 8ರಿಂದ 14ರವರೆಗೆ ಏಕದಿನ ಸರಣಿ ನಡೆಯಲಿದೆ. ಆಗಸ್ಟ್ 16ರಂದು ಬೆಂಗಳೂರಲ್ಲಿ ಕೆಪಿಎಲ್​ಗೆ ಚಾಲನೆ ಸಿಗಲಿದ್ದು, ನಂತರ ಮೈಸೂರು, ಹುಬ್ಬಳ್ಳಿ ಮೊದಲಾದ ಕಡೆಗಳಲ್ಲಿ ಮ್ಯಾಚ್​ಗಳು ನಡೆಯಲಿವೆ.

ತಂಡಗಳು : ಬಳ್ಳಾರಿ ಟಸ್ಕರ್ಸ್​, ಬಿಜಾಪುರ ಬುಲ್ಸ್, ಬೆಳಗಾವಿ ಪ್ಯಾಂಥರ್ಸ್​, ಬೆಂಗಳೂರು ಬ್ಲಾಸ್ಟರ್ಸ್​, ಹುಬ್ಬಳ್ಳಿ ಟೈಗರ್ಸ್, ಮೈಸೂರು ವಾರಿಯರ್ಸ್​​, ಶಿವಮೊಗ್ಗ ಲಯನ್ಸ್

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments