‘ಕುರುಕ್ಷೇತ್ರ’ದ ಅಸಲಿ ‘ದರ್ಶನ’..!

0
388

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕುರುಕ್ಷೇತ್ರ’ದ ಅಸಲಿ ‘ದರ್ಶನ’ವಾಗಿದೆ. ಸಿನಿಮಾದ ಎರಡನೇ ಟ್ರೈಲರ್ ರಿಲೀಸ್ ಆಗಿದ್ದು ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.
ಇತ್ತೀಚೆಗೆ ರಿಲೀಸ್ ಆಗಿದ್ದ ಟ್ರೈಲರ್ ಯೂಟ್ಯೂಬ್​ನಲ್ಲಿ ಸದ್ದು ಮಾಡಿದ್ದರೂ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಇರ್ಲಿಲ್ಲ. ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಚಿತ್ರತಂಡ ಮತ್ತೊಂದು ಟ್ರೈಲರ್ ಬಿಡುಗಡೆ ಮಾಡಿದೆ. ಈ ಹೊಸ ಟ್ರೈಲರ್​ನಲ್ಲಿ ‘ಕುರುಕ್ಷೇತ್ರ’ದ ಅಸಲಿ ದರ್ಶನವಾಗಿದೆ.
ಮುನಿರತ್ನ ನಿರ್ಮಾಣದ, ನಾಗಣ್ಣ ನಿರ್ದೇಶನದ ಈ ಸಿನಿಮಾದಲ್ಲಿ ದರ್ಶನ್ ಮಾತ್ರವಲ್ಲದೆ ರೆಬೆಲ್ ಸ್ಟಾರ್ ಅಂಬರೀಶ್, ಕ್ರೇಜಿಸ್ಟಾರ್ ರವಿಚಂದ್ರನ್, ಶಶಿಕುಮಾರ್, ಅರ್ಜುನ್ ಸರ್ಜಾ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ದೊಡ್ಡ ತಾರಗಣವಿದೆ. ಆಗಸ್ಟ್ 2ಕ್ಕೆ ರಿಲೀಸ್ ಆಗಲಿದೆ.

LEAVE A REPLY

Please enter your comment!
Please enter your name here