Home ರಾಜ್ಯ 'ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ನೇಣಿಗೆ ಶರಣು'

‘ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ನೇಣಿಗೆ ಶರಣು’

ಶಿವಮೊಗ್ಗ: ಅಂತಿಮ ವರ್ಷದ ಎಂ.ಬಿ.ಬಿ.ಎಸ್. ವ್ಯಾಸಾಂಗ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ. 

ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ, ಅಂತಿಮ ವರ್ಷ ವ್ಯಾಸಾಂಗ ಮಾಡುತ್ತಿದ್ದ ಲಲಿತಾ (23) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿಯಾಗಿದ್ದಾಳೆ.  ಮೆಡಿಕಲ್ ಕಾಲೇಜಿನ  ವಿದ್ಯಾರ್ಥಿನಿಯರ ನಿಲಯದ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ಏನು ಎಂದು ಇನ್ನೂ ತಿಳಿದು ಬಂದಿಲ್ಲ. 

ಭದ್ರಾವತಿಯ ಶಿಕ್ಷಕ ವೆಂಕಟೇಶ್ ಎಂಬುವರ ಪುತ್ರಿಯಾಗಿರುವ ವಿದ್ಯಾರ್ಥಿನಿ ಲಲಿತಾ, ನಿನ್ನೆ ಮಧ್ಯಾಹ್ನದಿಂದ ತನ್ನ ರೂಂ. ನಿಂದ ಹೊರ ಬಂದಿರಲಿಲ್ಲ ಎನ್ನಲಾಗಿದೆ.  ಅನುಮಾನದ ಮೇರೆಗೆ, ಇಂದು ಬೆಳಿಗ್ಗೆ ಬಾಗಿಲು ತೆರೆಸಿ ನೋಡಿದಾಗಲೇ, ವಿಷಯ ತಿಳಿದು ಬಂದಿದೆ.  ಇನ್ನು ಆತ್ಮಹತ್ಯೆಗೆ ನಿಖರ ಕಾರಣ ಇದುವರೆಗೂ ತಿಳಿದು ಬಂದಿಲ್ಲ.  ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಕೃಷಿ ಕಾಯ್ದೆಯನ್ನು ರದ್ದು ಮಾಡುವುದಿಲ್ಲ: ನರೇಂದ್ರ ಸಿಂಗ್ ತೋಮರ್

ದೆಹಲಿ: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಒಂದೂವರೆ ತಿಂಗಳಿನಿಂದ ರಾಷ್ಟ್ರ ರಾಜಧಾನಿಯಲ್ಲಿ ಪ್ರೊಟೆಸ್ಟ್ ನಡೆಸುತ್ತಿವೆ. ಇದರ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ದೇಶದ ಹೆಚ್ಚಿನ ರೈತರು...

‘ನಾಳೆ ಸಿಎಂ ಯಡಿಯೂರಪ್ಪ ಉಡುಪಿ ಪ್ರವಾಸ’

ಬೆಂಗಳೂರು: ನಾಳೆ ನಾಡಿದ್ದು ಸಿಎಂ ಬಿಎಸ್ ಯಡಿಯೂರಪ್ಪ ಉಡುಪಿ ಪ್ರವಾಸ ಮಾಡಲಿದ್ದಾರೆ. ನಾಳೆ ಸಂಜೆ ಮಧ್ಯಾಹ್ನ 3 ಗಂಟೆಗೆ ಹೆಚ್ ಎ ಎಲ್ ನಿಂದ ಪ್ರಯಾಣ ಬೆಳೆಸಿ, ಸಂಜೆ 5 ಗಂಟೆಗೆ ಪರ್ಯಾಯ...

‘ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ’

ಬೆಂಗಳೂರು: ವಿರೋಧ ಪಕ್ಷಗಳ ವಿರೋಧದ ನಡುವೆಯೂ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿದ್ದು,  ನಾಳೆಯಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಈ  ಸಂಬಂಧ ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಈ ವಿಷಯ ಪ್ರಕಟಿಸಿದೆ. ಇನ್ನೂ...

‘ರೈತರ ಹೋರಾಟ ಬೆಂಬಲಿಸಿ ರಾಜಭವನ ಮುತ್ತಿಗೆ ಹಾಕಲು ಕೈ ರಣತಂತ್ರ’​

ಬೆಂಗಳೂರು: ರೈತರ ಹೋರಾಟಕ್ಕೆ ಬೆಂಬಲ ನೀಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನವರಿ 20 ರಂದು ಬೆಂಗಳೂರು ಸ್ತಬ್ಧ ಮಾಡುಲು ಪ್ಲಾನ್ ಮಾಡಿಕೊಂಡಿದೆ. ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಜನವರಿ 20 ರಂದು...

Recent Comments