Home ರಾಜ್ಯ ಮೈಸೂರು ಹಾಲ್​ಟಿಕೆಟ್​ ನಿರಾಕರಣೆ: ವಿದ್ಯಾರ್ಥಿಗಳ ಪ್ರತಿಭಟನೆ

ಹಾಲ್​ಟಿಕೆಟ್​ ನಿರಾಕರಣೆ: ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು: ಕಾಲೇಜು ಆಡಳಿತ ಮಂಡಳಿ 125 ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಪ್ರವೇಶ ಪತ್ರವನ್ನು ನೀಡುತ್ತಿಲ್ಲ ಅಂತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ಶಾರದವಿಲಾಸ್ ಕಾನೂನೂ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ಇನ್ನೇನು ಪರೀಕ್ಷೆಗೆ ಕೆಲವೇ ದಿನಗಳು ಬಾಕಿ ಇರುವಾಗ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ನೀಡುವಂತೆ ಮನವಿ ಮಾಡಿದ್ದಾರೆ. ಆದರೆ ಕಾಲೇಜಿನ ಆಡಳಿತ ಮಂಡಳಿ ಹಾಜರಾತಿ ಕೊರತೆ ಇರುವುದರಿಂದ 125 ವಿದ್ಯಾರ್ಥಿಗಳಿಗೆ ಯಾವೂದೇ ಕಾರಣಕ್ಕೂ ಪ್ರವೇಶ ಪತ್ರ ನೀಡುವುದಿಲ್ಲ ಅಂತ ಹೇಳಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಶೋಕಪುರಂ ಪೊಲೀಸರು ಭೇಟಿ ನೀಡಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments