ಬೆಂಗಳೂರು : ಸ್ಯಾಂಡಲ್ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕೊರೋನಾ ಮಾರ್ಗಸೂಚಿ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ವಕೀಲೆಯೊಬ್ಬರು ಹೈಕೋರ್ಟ್ನಲ್ಲಿ ದೂರು ದಾಖಲಿಸಿದ್ದಾರೆ.
ಚಾಮುಂಡೇಶ್ವರಿ ದೇವಸ್ಥಾನದ ಭೇಟಿ ವೇಳೆ ದರ್ಶನ್ ಕೊರೋನಾ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದಾರೆ. ಲಾಕ್ಡೌನ್ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೋಗುವಂತಿಲ್ಲ ಅಂತಿದ್ದರೂ ಹೋಗಿದ್ದಾರೆ. ಅಲ್ಲದೆ ಅಂತರ ಕಾಯ್ದುಕೊಳ್ಳದೆ ನಿಯಮವನ್ನು ಕಡೆಗಾಣಿಸಿದ್ದಾರೆ ಅಂತ ಆರೋಪಿಸಿ ವಕೀಲೆ ಗೀತಾ ಮಿಶ್ರಾ ಹೈಕೋರ್ಟ್ ಮೆಟ್ಟಿಲೇರಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ದರ್ಶನ್ ಮಾತ್ರವಲ್ಲದೆ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಎಂ. ಕೆ ಸೋಮಶೇಖರ್ ವಿರುದ್ಧವೂ ದೂರು ದಾಖಲಿಸಿದ್ದಾರೆ.