Home ರಾಜ್ಯ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಸವರಾಜ ದಡೆಸೂಗೂರು

ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಸವರಾಜ ದಡೆಸೂಗೂರು

ಕೊಪ್ಪಳ: ತ್ರಿವಳಿ  ಜಿಲ್ಲೆಗಳಾದ ಕೊಪ್ಪಳ ಬಳ್ಳಾರಿ ರಾಯಚೂರು ಮೂರು ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನಲೆ ಕೊಪ್ಪಳದ ಕನಕಗಿರಿ ಕ್ಷೇತ್ರದ ಶಾಸಕರಾದ ಬಸವರಾಜ ದಡೆಸೂಗೂರು ಇಂದು ತುಂಗಭದ್ರಾ ಜಲಾಶಯದಲ್ಲಿ ಬಾಗಿನ ಅರ್ಪಣೆ ಮಾಡಿ ವರುಣ ಹೋಮ ಮಾಡಿದರು.

ಆಗಸ್ಟ್ 15ರಂದೇ ಬಾಗಿನ‌ ಅರ್ಪಣೆ ಮಾಡಬೇಕಾಗಿತ್ತು. ಆದರೆ ಈ ಕೊರೋನಾ ಭೀತಿ ಹಿನ್ನಲೆ ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲಾಡಳಿತ ಜಲಾಶಯ ವೀಕ್ಷಣೆಯನ್ನು ನಿಷೇಧ ಮಾಡಿತ್ತು. ಈ ಕಾರಣದಿಂದ ಇಂದು‌ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಾಯಿತು. ಇನ್ನೂ ಕಾರ್ಯಕ್ರಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ರೈತ ಬಾಂಧವರು ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಸಿ ಬಾಗಿನ ಅರ್ಪಣೆ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಮೂರು ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯವೂ ಪ್ರತಿ ವರ್ಷವೂ ಇದೇ ರೀತಿ ಭರ್ತಿಯಾಗಿ ಈ ಭಾಗದ ರೈತರು,ಕಾರ್ಮಿಕರು,ಅನ್ನದಾತರು,ದುಡಿಯವ ವರ್ಗದವರು, ಎಲ್ಲರ ಬದುಕು ಬಂಗಾರವಾಗಬೇಕು ಎನ್ನುವ ಉದ್ದೇಶದಿಂದ ತುಂಗಾಭದ್ರೆಯ ಒಡಿಲಿಗೆ ಬಾಗಿನ ಅರ್ಪಿಸಿ, ಕಾಲಕಾಲಕ್ಕೆ ವರುಣನ ಕೃಪೆಯು ಇರಲಿ ಯಾವ ಕಾರಣಕ್ಕೂ ವರುಣಾಘಾತ ಆಗದಿರಲಿ ಎನ್ನುವ ಉದ್ದೇಶಕ್ಕೆ ಬಾಗಿನ ಅರ್ಪಣೆ ಜೊತೆಗೆ ವರುಣಾ ಹೋಮ ಪೂಜೆಯನ್ನು ನೆರವೆರಿಸಲಾಗಿದೆ. ಇನ್ನೂ ದೂರದಿಂದ ಬಂದಂತಹ ಎಲ್ಲರಿಗೂ ಭೋಜನ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರೂ ಭೋಜನ ಸವಿದು ತುಂಗಭದ್ರಾ ಜಲಾಶಯದ ಸುತ್ತ ಒಂದು ಸುತ್ತು ಹಾಕಿ ರಮಣೀಯ ದೃಶ್ಯಗಳನ್ನು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದು ಖುಷಿಪಟ್ಟರು.

-ಶುಕ್ರಾಜ ಕುಮಾರ್

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments