Sunday, May 29, 2022
Powertv Logo
Homeರಾಜ್ಯಮತ್ತೆ ಲಾಕ್​ಡೌನ್​ ಆಗುತ್ತಾ ಬೆಂಗಳೂರು ?

ಮತ್ತೆ ಲಾಕ್​ಡೌನ್​ ಆಗುತ್ತಾ ಬೆಂಗಳೂರು ?

ಬೆಂಗಳೂರು: ರಾಜಧಾನಿಯಲ್ಲಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುತ್ತಿರುವ ಸ್ಥಳಗಳನ್ನು ಗುರುತಿಸಿ ಕಟ್ಟುನಿಟ್ಟಾಗಿ ಸೀಲ್ ಡೌನ್ ಮಾಡಲು‌ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಇಂದು ನಡೆದ ಮುಖ್ಯಮಂತ್ರಿಗಳ ಸಭೆ ಬಳಿಕ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ  ಸಚಿವ ಆರ್. ಅಶೋಕ್, ಕಲಾಸಿಪಾಳ್ಯ, ಚಿಕ್ಕಪೇಟೆ, ಕೆ.ಆರ್. ಮಾರುಕಟ್ಟೆ ಪ್ರದೇಶಗಳಲ್ಲೇ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿದ್ದು, ಆ ಸ್ಥಳಗಳನ್ನು ಸೀಲ್ ಡೌನ್ ಮಾಡಲಾಗುವುದು ಎಂದು ಹೇಳಿದ್ದಾರೆ.ಸಿದ್ದಾಪುರ, ಕಲಾಸಿಪಾಳ್ಯ, ವಿದ್ಯಾರಣ್ಯಪುರ, ಯಲಹಂಕ, ಧರ್ಮರಾಯನ‌ ದೇವಸ್ಥಾನ ವಾರ್ಡ್ ಗಳಲ್ಲಿ ಹೆಚ್ಚು ಪ್ರಕರಣ ಪತ್ತೆಯಾದ ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಸೋಂಕು ಹೆಚ್ಚಾಗುತ್ತಿರುವ ಸ್ಥಳಗಳನ್ನು ಲಾಕ್ ಡೌನ್ ಮಾಡುವುದಾಗಿ ಆರ್.‌ಅಶೋಕ್ ಹೇಳಿದ್ದಾರೆ. ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳು ತಮ್ಮನ್ನು ಟ್ರಾಕ್​ ಮಾಡುತ್ತಾರೆಂಬ ಕಾರಣದಿಂದ ಮೊಬೈಲ್​ಗಳನ್ನು  ಮನೆಯಲ್ಲಿ ಬಿಟ್ಟು ಬೀದಿ ಸುತ್ತುವ ಬಗ್ಗೆ ಮಾಹಿತಿ ದೊರೆತಿದ್ದು, ಅಂತವರ ಬಗ್ಗೆ ಕ್ರಿಮಿನಲ್ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಿದ್ದೇವೆ ಎಂದು ಅಶೋಕ್ ಹೇಳಿದರು..

 

 

 

LEAVE A REPLY

Please enter your comment!
Please enter your name here

- Advertisment -

Most Popular

Recent Comments