ಬೆಂಗಳೂರು: ಕೊರೋನಾ ವೈರಸ್ ಹರಡುವುದನ್ನು ತಡೆಯುವ ಹಿನ್ನೆಲೆ ಲಾಕ್ಡೌನ್ ಆದೇಶವನ್ನು ಹೊರಡಿಸಲಾಗಿದೆ. ಆದರೆ ರಾಜ್ಯದಲ್ಲಿ ಲಾಕ್ಡೌನ್ ಇದ್ದರೂ ಜನರ ಓಡಾಟ ಹಾಗೂ ವಾಹನಗಳ ಸಂಚಾರ ನಿಯಂತ್ರಣಕ್ಕೆ ಬರುತ್ತಿಲ್ಲ. ಹಾಗಾಗಿ ಲಾಕ್ಡೌನ್ ಆದೇಶವನ್ನು ಇಂದಿನಿಂದ ಮತ್ತಷ್ಟು ಕಟ್ಟುನಿಟ್ಟುಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಲಾಕ್ಡೌನ್ ಆದೇಶವನ್ನು ಪಾಲಿಸದೇ ಅಂಥವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಪೊಲೀಸರಿಗೆ ಪೂರ್ಣ ಅಧಿಕಾರ ನೀಡಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಮಿಷನರ್ ಭಾಸ್ಕರ್ ರಾವ್, ಸಾರ್ವಜನಿಕ ಹಿತದೃಷ್ಟಿಯಿಂದ ಸಾಮಾಜಿಕ ದೂರವನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.
Social Distancing will be enforced more stringently in public interest. Your Life is more important than your Job.
— Bhaskar Rao IPS (@deepolice12) April 6, 2020