ನಟಿ ವಿಜಯಲಕ್ಷ್ಮಿ ನೆರವಿಗೆ ‘ಮದಗಜ’ ಟೀಮ್

0
418

ಬೆಂಗಳೂರು : ತೀವ್ರ ಜ್ವರ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ನಟಿ ವಿಜಯಲಕ್ಷ್ಮಿ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆ ವೆಚ್ಚ ಭರಿಸಲು ಕಷ್ಟವಾಗಿರೋದ್ರಿಂದ ಅವರ ಸಹೋದರಿ ನೆರವಿಗೆ ಮೊರೆ ಹೋಗಿದ್ದಾರೆ. ಇದರ ಬೆನ್ನಲ್ಲೇ ಫಿಲ್ಮ್ ಚೇಂಬರ್ ವಿಜಯ ಲಕ್ಷ್ಮಿ ಅವರಿಗೆ ಹೆಚ್ಚು ಹೆಚ್ಚು ಅವಕಾಶ ಕೊಡಿ ಅಂತ ನಿರ್ಮಾಪಕರು ಮತ್ತು ನಿರ್ದೇಶಕರಲ್ಲಿ ಮನವಿ ಮಾಡಿತ್ತು.
ಇದೀಗ ‘ಮದಗಜ’ ಟೀಮ್ ವಿಜಯಲಕ್ಷ್ಮಿ ಅವರಿಗೆ ತಮ್ಮ ಚಿತ್ರದಲ್ಲಿ ನಟಿಸುವ ಅವಕಾಶವನ್ನು ನೀಡಿದೆ. ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ‘ಮದಗಜ’ ಸಿನಿಮಾದಲ್ಲಿ ವಿಜಯ ಲಕ್ಷ್ಮಿ ಅವರು ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರತಂಡ ಆಸ್ಪತ್ರೆಗೆ ಭೇಟಿ ನೀಡಿ ವಿಜಯ ಲಕ್ಷ್ಮಿ ಅವರ ಆರೋಗ್ಯವನ್ನು ವಿಚಾರಿಸಿದೆ. ಶೀಘ್ರದಲ್ಲೇ ವಿಜಯ ಲಕ್ಷ್ಮಿ ಅವರು ‘ಮದಗಜ’ ಟೀಮ್​ ಸೇರಿಕೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here