Sunday, June 26, 2022
Powertv Logo
Homeರಾಜ್ಯಸಂಸದ ಪ್ರಜ್ವಲ್ ರೇವಣ್ಣ ಕಾಲಿಗೆರಗಿದ ಮಧುಗಿರಿ ಶಾಸಕ!

ಸಂಸದ ಪ್ರಜ್ವಲ್ ರೇವಣ್ಣ ಕಾಲಿಗೆರಗಿದ ಮಧುಗಿರಿ ಶಾಸಕ!

ತುಮಕೂರು: ನಿವೃತ್ತ ಐಎಎಸ್ ಅಧಿಕಾರಿಯಾಗಿರುವ ಹಾಗೂ ತುಮಕೂರು ಜಿಲ್ಲೆಯ ಮಧುಗಿರಿ ಶಾಸಕರಾಗಿರುವ ಎಂ.ವಿ.ವೀರಭದ್ರಯ್ಯ ನೂರಾರು ಜನರ ಮುಂದೆ ತಮಗಿಂತ ಕಿರಿಯರಾದ ಪ್ರಜ್ವಲ್ ರೇವಣ್ಣ ಕಾಲಿಗೆರಗಿ ಆಶೀರ್ವಾದ ಪಡೆದಿರುವುದು ಆಶ್ಚರ್ಯ ಮೂಡಿಸಿದೆ.

ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಸತ್ಯನಾರಾಯಣ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಜ್ವಲ್ ರೇವಣ್ಣ ಅವರ ಕಾಲಿಗೆ ಬಿದ್ದ ಮಧುಗಿರಿ ಶಾಸಕ ವೀರಭದ್ರಯ್ಯ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಹಿರಿಯರ ಕಾಲಿಗೆ ಕಿರಿಯರು ಬಿದ್ದು ವಿಧೇಯತೆ ಅಭಿಮಾನ ವ್ಯಕ್ತಪಡಿಸುವುದು ಸಾಮಾನ್ಯವಾಗಿದೆ, ಆದರೆ ಜೆಡಿಎಸ್ ಪಕ್ಷದ ವರಿಷ್ಠರ ವಂಶದ ಕುಡಿ ಎಂಬ ಕಾರಣಕ್ಕೆ ಪ್ರಜ್ವಲ್ ರೇವಣ್ಣ ವಯಸ್ಸಿನಲ್ಲಿ ಕಿರಿಯರಾದ್ರು ಹಿರಿಯರಾದ ನಿವೃತ್ತ ಐಎಎಸ್ ಅಧಿಕಾರಿ ವೀರಭದ್ರಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

-ಹೇಮಂತ್ ಕುಮಾರ್ ಜೆ ಎಸ್ 

2 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments