Home uncategorized ಮಹಾರಾಷ್ಟ್ರಕ್ಕೆ ಅಂಟಿಕೊಂಡ ಬೆಳಗಾವಿ ಜಿಲ್ಲೆಯ 6 ತಾಲ್ಲೂಕುಗಳು ಸಂಪೂರ್ಣ ಲಾಕ್ ಡೌನ್

ಮಹಾರಾಷ್ಟ್ರಕ್ಕೆ ಅಂಟಿಕೊಂಡ ಬೆಳಗಾವಿ ಜಿಲ್ಲೆಯ 6 ತಾಲ್ಲೂಕುಗಳು ಸಂಪೂರ್ಣ ಲಾಕ್ ಡೌನ್

ಚಿಕ್ಕೋಡಿ: ಮಹಾರಾಷ್ಟ್ರಕ್ಕೆ ಅಂಟಿಕೊಂಡ ಬೆಳಗಾವಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿವೇ ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಜಿಲ್ಲೆಯ ಗಡಿಭಾಗದ ಐದು ತಾಲೂಕುಗಳು ಸಂಪೂರ್ಣ ಲಾಕ್​ಡೌನ್​ ಮಾಡಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ವಿವಿಧ ತಾಲೂಕುಗಳಲ್ಲಿ ಅಷ್ಟೇ ಅಲ್ಲದೆ ನಗರದಲ್ಲಿಯೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ನಗರ ವಾಸಿಗಳಲ್ಲಿ ಭೀತಿ ಮೂಡಿದೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತ ಸಂಖ್ಯೆ  561ಕ್ಕೆ ತಲುಪಿದ್ದು ಈಗಾಗಲೇ ಜಿಲ್ಲೆಯಲ್ಲಿ‌ ಕೋರೊನಾದಿಂದ 14ಜನ ಸಾವನ್ನಪ್ಪಿದ್ದಾರೆ….  ನಿನ್ನೆ ಒಂದೇ ದಿನ 64 ಹೊಸ ಕೇಸ್ ಪತ್ತೆ ಆಗುವುದರ ಮೂಲಕ ನಿನ್ನೆ ಒಂದೇ ದಿನಕ್ಕೆ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ  ಜಿಲ್ಲೆಯ ಅಥಣಿ, ಕಾಗವಾಡ, ನಿಪ್ಪಾಣಿ, ಗೋಕಾಕ್ ಹಾಗೂ ಮೂಡಲಗಿ ತಾಲೂಕುಗಳನ್ನು ನಿನ್ನೆ ರಾತ್ರಿಯಿಂದ ಮುಂದಿನ 7 ದಿನಗಳ ಕಾಲ ಲಾಕ್​​ಡೌನ್ ಮಾಡಲಾಗಿದೆ. ಹಾಗೂ ಚಿಕ್ಕೋಡಿ ತಾಲೂಕು ಸ್ವಯಂ ಪ್ರೇರಿತವಾಗಿ‌ ೮ ದಿನಗಳ ಲಾಕ್ ಡೌನ್ ಆಗಿದೆ..ಆದ್ದರಿಂದ ಜಿಲ್ಲೆಯ ೬ ತಾಲೂಕುಗಳು ವೈರಾಣು ತಡೆಯುವ ಪ್ರಯತ್ನದಲ್ಲಿವೆ … ಅಥಣಿ, ಕಾಗವಾಡ, ನಿಪ್ಪಾಣಿ,ಚಿಕ್ಕೋಡಿ ತಾಲೂಕುಗಳು ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿದ್ದು, ಸೋಂಕು ವ್ಯಾಪ್ತಿಸುತ್ತಿರೋ ಹಿನ್ನೆಲೆಯಲ್ಲಿ ಜಿಲ್ಲಾಢಳಿತ ನಿರ್ಧಾರವನ್ನು ಕೈಗೊಂಡಿದೆ… ಬೆಳಿಗ್ಗೆಯಿಂದ ಯಾವುದೇ ವಾಹನ ಸಂಚಾರವಿಲ್ಲದೆ ಸ್ತಬ್ಧವಾದ ಈ ತಾಲೂಕುಗಳಲ್ಲಿ ತುರ್ತು ಸೇವೆ , ಆವಶ್ಯಕ ವಸ್ತು ಖರಿದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ..

LEAVE A REPLY

Please enter your comment!
Please enter your name here

- Advertisment -

Most Popular

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

ಚೆನ್ನೈ ವಿರುದ್ಧ ಹಸಿರು ಜೆರ್ಸಿಯಲ್ಲಿ ಆರ್​ ಸಿ ಬಿ ಕಣಕ್ಕೆ..! ಕಾರಣ ಏನ್ ಗೊತ್ತಾ?

  ದುಬೈ :  13 ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಳೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣೆಸಲಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ...

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

Recent Comments