ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದ್ದು, ದೇಶದ ಸೋಂಕಿತರ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಗರಿಷ್ಠ ಮಟ್ದಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2 ಸಾವಿರದ 350 ಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 70,013 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಇಲ್ಲಿ ಸಾವನ್ನಪ್ಪಿದವರ ಸಂಖ್ಯೆಯೂ ಏರುತ್ತಿದ್ದು, ಕಳೆದ 24 ಗಂಟೆಯಲ್ಲಿ 76 ರಷ್ಟು ಸೋಂಕಿತರು ಮೃತಪಟ್ಟು, ಈವರೆಗೆ ಒಟ್ಟು ಮೃತಪಟ್ಟವರ ಸಂಖ್ಯೆಯೂ 2,362 ಕ್ಕೆ ಏರಿದೆ. ಇದರ ನಡುವೆಯೇ ಗುಣಮುಖರಾದವರ ಸಂಖ್ಯೆಯೂ 30,108 ಕ್ಕೆ ಏರಿದೆ.
ದೇಶದ ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಮುಂಬೈಯೇ ಹಾಟ್ಸ್ಪಾಟ್ ಆಗಿದೆ. ಮುಂಬೈಯೊಂದರಲ್ಲೇ 41,099 ರಷ್ಟು ಜನರಲ್ಲಿ ಸೋಂಕು ದೃಢಪಟ್ಟಿದೆ. ಇನ್ನುಳಿದಂತೆ ಮುಂಬೈ ನಂತರದ ಸ್ಥಾನದಲ್ಲಿ ಥಾಣೆ, ಪುಣೆಯಲ್ಲಿ 8 ಸಾವಿರಕ್ಕೂ ಹೆಚ್ಚು ಸಾವಿರಕ್ಕೂ ಹೆಚ್ಚು ಸೊಂಕಿತರು ಪತ್ತೆಯಾಗಿದ್ದಾರೆ.
zithromax 250mg tablets
zithromax over the counter