ದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 72ನೇ ಪುಣ್ಯ ತಿಥಿ ಪ್ರಯುಕ್ತ ರಾಜಘಾಟ್ನಲ್ಲಿರುವ ಗಾಂಧೀಜಿ ಸಮಾಧಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ಕೇಂದ್ರ ಸರ್ಕಾರ ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣೆ ಪ್ರಯುಕ್ತ ದೇಶಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಕೇಂದ್ರ ಸಚಿವ ರಾಜನಾಥ್ ಸಿಂಗ್, ಸೋನಿಯಾ ಗಾಂಧಿ, ಹಾಗೂ ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಸೇರಿದಂತೆ ಅನೇಕ ಗಣ್ಯರು ಗಾಂಧಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.
ಗಾಂಧೀಜಿ ಪುಣ್ಯತಿಥಿ ಅಂಗವಾಗಿ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಕ್ ಕಲಾಕೃತಿಗಳನ್ನು ಬಿಡಿಸಿದ್ದಾರೆ.
Homage to ‘Father of the Nation’ #MahatmaGandhi on #MartyrsDay. I am sharing one of my sand art. pic.twitter.com/TpxJHBI230
— Sudarsan Pattnaik (@sudarsansand) January 30, 2020